ಅಂಗಡಿಗಳ ಮೇಲೆ ದಾಳಿ: ಪ್ಲಾಸ್ಟಿಕ್ ವಶ
ಹೊಳೆನರಸೀಪುರ: ಪಟ್ಟಣದ ಹಲವು ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳ ತಂಡ ಶುಕ್ರವಾರ ದಾಳಿ ನಡೆಸಿ ಗುಣಮಟ್ಟವಿಲ್ಲದ ಪ್ಲಾಸ್ಟಿಕ್ ವಶಪಡಿಸಿಕೊಂಡರು. ಪುರಸಭೆ ಪರಿಸರ ಎಂಜಿನಿಯರ್ ಅರ್ಚನಾಆರಾದ್ಯ ಮತ್ತು ಆರೋಗ್ಯ ನಿರೀಕ್ಷಕ ವಸಂತಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದರು. ಪುರಸಭೆಯಿಂದ ಈಗಾಗಲೇ ಹಲವಾರು ಬಾರಿ ಪ್ಲಾಸ್ಟಿಕ್ ನಿಷೇಧಿಸಿದ್ದು, ಅವುಗಳ ಮಾರಾಟ ಮಾಡದಂತೆ ಮನವರಿಕೆ ಮಾಡಿಕೊಡಲಾಗಿತ್ತು. ಆದರೂ ಪಟ್ಟಣದಲ್ಲಿ ರಾಜಾರೋಷವಾಗಿ ಪ್ಲಾಸ್ಟಿಕ್ ಬಳಕೆ ನಡೆಯುತ್ತಿದ್ದ ಕಾರಣ ಅಧಿಕಾರಿಗಳು ವಶಕ್ಕೆ ಪಡೆದರು.ಎಚ್ಚರಿಕೆ: ವರ್ತಕರು ಪುರಸಭೆ ಆದೇಶ ದಿಕ್ಕರಿಸಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವುದರಿಂದ ಪುರಸಭೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕಾಗಿದೆ ಎಂದು ಪರಿಸರ ಎಂಜಿನಿಯರ್ ಅರ್ಚನಾಆರಾದ್ಯ ತಿಳಿಸಿದ್ದಾರೆ. ಇದೆ ರೀತಿ ವರ್ತಕರು ಮುಂದುವರಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದಾಗಿ ಪುರಸಭೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

