ಹಾಸನ

ಜನಪದ ಉಳಿಸಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ

Published On :

ಹೊಳೆನರಸೀಪುರ: ಕರುನಾಡು ವಿವಿಧ ಸಂಪತ್ತನನ್ನು ಪಡೆದ ನಾಡಾಗಿದ್ದು, ಇವುಗಳಲ್ಲಿ ಜಾನಪದ ಸಂಪತ್ತು ಕೂಡ ಒಂದು. ಈ ದೇಶದ ಕಲೆ, ಸಾಹಿತ್ಯ, ಸಂಗೀತ, ನೃತ್ಯಗಳು ನಾಡಿನ ದಿಕ್ಕನ್ನು ತೋರಿಸುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಬಿ.ಎಂ.ಬಿ. ಇರ್ಷಾದ್ ನುಡಿದರು.  ತಾಲೂಕು ಜಾನಪದ ಕಲಾ ಪರಿಷತ್ ಪಟ್ಟಣದ ಪ್ರಿಯದರ್ಶಿನಿ ಪದವಿ ಪೂರ್ವ ಕಾಲೇಜಿನ ವಿದ್ಯಾಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಜಾನಪದ ಗೀತ ಗಾಯನ ಸ್ಪರ್ಧೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಅಳವಡಿಸಿಕೊಳ್ಳಿ: ಪ್ರಸ್ತುತ ಸಮಾಜದಲ್ಲಿ ಇಂತಹ ಜಾನಪದ ಕಲೆಗಳು ಮರೆಯಾಗುತ್ತಿರುವುದರಿಂದ ಇದನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅವಶ್ಯವೆಂದು ಅಭಿಪ್ರಾಯಪಟ್ಟರಲ್ಲದೇ, ಜಾನಪದ ಕಲೆಯನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಆಳವಡಿಸಿಕೊಂಡು ಕಲೆಯ ಉಳಿವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಪರಿಷತ್ತಿನ ಮಹಿಳಾ ಘಟಕದ ಕಾರ್ಯದರ್ಶಿ ಕಾವ್ಯಶ್ರೀ ಜಾನಪದ ಗೀತೆಗಳನ್ನು ಹಾಡುವ ಮೂಲಕ ಸರ್ವ ಕಾಲಕ್ಕು ಅವಶ್ಯ ಎಂಬುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.