ಹಾಸನ

ಅತ್ಯಾಚಾರಿ ಗಲ್ಲಿಗೇರಿಸಿ: ಆಗ್ರಹ

Published On :

ಅರಸೀಕೆರೆ: ಬೆಂಗಳೂರು ಮಹಾನಗರದಲ್ಲಿ ಯುವತಿಯೊಬ್ಬಳನ್ನು ಕಾರಿನಲ್ಲಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
 ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ ರಾಜ್ಯದಲ್ಲಿ ಅತ್ಯಾಚಾರದಂತಹ ಪ್ರಕರಣಗಳು ಪದೇ ಪದೇ ಪುನಾರವರ್ತನೆಯಾಗುತ್ತಿದ್ದರೂ ಅದನ್ನು ತಡೆಗಟ್ಟುವಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಗೃಹ ಸಚಿವ ಕೆ.ಜೆ.ಜಾರ್ಜ್‌ರಾಜಿನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಆರೋಪಿ ಗಲ್ಲಿಗೇರಿಸಿ: ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಕಣಕಟ್ಟೆ ಮಂಜು ರಾಜ್ಯದ ಮಹಾನಗರವಾದ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ. ಅತ್ಯಾಚಾರ ಆರೋಪಿ ನಾಸೀರ್ ಹೈದರ್‌ನನ್ನು ಗಲ್ಲಿಗೇರಿಸಬೇಕು. ಇದಕ್ಕೆ ಪ್ರೋತ್ಸಾಹ ನೀಡಿದ ಇನ್ನುಳಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ಕರ್ತವ್ಯ ಲೋಪವೆಸಗಿದ ಇನ್ಸ್‌ಪೆಕ್ಟರ್ ಮಹಮದ್ ರಫಿಕ್‌ನನ್ನು ಕರ್ತವ್ಯದಿಂದ ವಜಾಮಾಡಬೇಕೆಂದು ಒತ್ತಾಯಿಸಿದರು.
 ಪ್ರತಿಭಟನೆಯಲ್ಲಿ ಎಬಿವಿಪಿ ಸಹ ಕಾರ್ಯದರ್ಶಿ ಗಿರೀಶ್ ವಿದ್ಯಾರ್ಥಿ ಮುಖಂಡರಾದ ವೇದಾಂತ್, ಪುನಿತ್, ಚೈತ್ರ, ಶಾಲಿನಿ, ವಿಜಯ್, ದೀಪೇಶ್ ಗೌಡ, ಚೇತನ್ ಗೌಡ, ಬಸವೇಶ್ ಇನ್ನಿತರರು ನೇತೃತ್ವ ವಹಿಸಿದ್ದರು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.    

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.