ಹಾಸನ

ಪೊಲೀಸ್ ದೌರ್ಜನ್ಯ ವಿರುದ್ಧ ಜಾಗೃತಿ

Published On :

ಹಾಸನ: ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇದನ್ನು ತಡೆಯಲು ಸೋಮವಾರ ಜಿಲ್ಲಾದ್ಯಂತ ಪೊಲೀಸ್ ಇಲಾಖೆಯಿಂದ ಜಾಗೃತಿ ಕಾರ್ಯಾಗಾರ ನಡೆಸಲಾಯಿತು.
ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ, ಕಾಲೇಜುಗಳಲ್ಲಿ  ವಿದ್ಯಾರ್ಥಿನಿಯರ ರಕ್ಷಣೆಗಾಗಿ ವಿದ್ಯಾರ್ಥಿಗಳ ಸಂಘವನ್ನು ಪೊಲೀಸ್ ಇಲಾಖೆ ಮಾರ್ಗ ಸೂಚಿಯಡಿ ಸ್ಥಾಪಿಸಲಾಯಿತು. ನಂತರ ಜಾಗೃತಿ ಕಾರ್ಯಾಗಾರ ನಡೆಯಿತು.
ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ರಕ್ಷಣೆಗಾಗಿ ವಿದ್ಯಾರ್ಥಿಗಳ ಸಂಘ  ಸ್ಥಾಪನೆ ಕುರಿತು ಉಪನ್ಯಾಸದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್, ಇತ್ತಿಚಿನ ದಿನಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮ ಮತ್ತು ಅನುಸರಿಸಬೇಕಾದ ಮಾರ್ಗಸೂಚಿಯನ್ನು ನಮ್ಮ ಇಲಾಖೆ ಹಾಗೂ ಇತರೆ ಇಲಖೆ ಸಹಯೋಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದನ್ನು ತಡೆಯಲು ಕೇವಲ ಪೊಲೀಸ್ ಇಲಾಖೆಯ ಕರ್ತವ್ಯವಲ್ಲ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಮನುಷ್ಯನ ವೈಯಕ್ತಿಕ ಲೋಪದೋಷ ತೊಳೆದು ಯಾವು ಭಯವಿಲ್ಲದ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂದರು.
ಸ್ಥಾಪನೆಯಾಗಿರುವ ವಿದ್ಯಾರ್ಥಿನಿಯರ ರಕ್ಷಣೆಗಾಗಿ ವಿದ್ಯಾರ್ಥಿಗಳ ಸಂಘ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಮೊಬೈಲ್ ದೂರವಾಣಿಗಳನ್ನು ಹೊಂದಿ ತುರ್ತು ಸಂದರ್ಭದಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಂಘಕ್ಕೆ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆಆರ್‌ಬಿ ಇನ್ಸ್‌ಪೆಕ್ಟರ್ ನೋಡಲ್ ಅಧಿಕಾರಿಯಾಗಿರುತ್ತಾರೆ. ಎಲ್ಲಾ ಶಾಲಾ ಮುಖ್ಯೋಪಾಧ್ಯಾಯರು ಇವರೊಂದಿಗೆ ಸತತ ಸಂಪರ್ಕದಲ್ಲಿದ್ದು, ಸಂಘದ ಪ್ರಗತಿಯನ್ನು ತಿಳಿಸಬಹುದಾಗಿದೆ ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಂಕರ್ ಮಾತನಾಡಿ, ಪ್ರಸ್ತುತ ನಡೆಯುತ್ತಿರುವ ದೌರ್ಜನ್ಯಗಳಿಂದಾಗಿ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದರು.
ವೈದ್ಯೆ ಡಾ.ಸುಧಾ ಮಾತನಾಡಿದರು. ವಿದ್ಯಾರ್ಥಿಗಳ ರಕ್ಷಣೆಗಾಗಿ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ನಗರದ ಎವಿಕೆ ಕಾಲೇಜು, ಸಂತಜೋಸೆಫ್ ಸೇರಿದಂತೆ ನಾನಾ ಶಾಲಾ-ಕಲೇಜುಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಐ.ಎಂ. ಮೋಹನ್, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಗೀತಾ, ಪತ್ರಕರ್ತ ಬಿ.ಆರ್. ಉದಯಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.