ಮಹಿಳಾ ದೌರ್ಜನ್ಯಕ್ಕೆ ಖಂಡನೆ
ಆಲೂರು: ನಿರಂತರವಾಗಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ಶೋಷಣೆಗಳನ್ನು ಖಂಡಿಸಿ ಪಟ್ಟಣದಲ್ಲಿ ಕರವೇ ವತಿಯಿಂದ ಪ್ರತಿಭಟನೆ ನಡೆಸಿತು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ನಂತರ ಮಾತನಾಡಿದ ಕರವೆ ಅಧ್ಯಕ್ಷ ನಟರಾಜ್, ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಪ್ರತಿ ದಿನ 5 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಅತ್ಯಾಚಾರಿಗಳಿಗೆ ಸ್ವರ್ಗವಾಗಿ ಪರಿಣಮಿಸಿದೆ. ಇಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿಯಲ್ಲಿ ಇಲ್ಲದಿರುವುದು ಕಾರಣವಾಗಿದೆ ಎಂದು ಖಂಡಿಸಿದರು.
ಇಂತಹವರ ವಿರುದ್ದ ಕಠಿಣ ಕಾನೂನು ಜಾರಿಗೆ ತಂದು ತಕ್ಷವೇ ಅವರಿಗೆ ಉಗ್ರ ಶಿಕ್ಷೆ ನೀಡಬೇಕು. ಇಲ್ಲದಿದ್ದಲ್ಲಿ ಮುಂದೊಂದು ದಿನ ರಾಜ್ಯಕ್ಕೆ ಬರಲು ಬೇರೆಯವರು ಹೆದರಿ ಹಿಂದೆ ಸರಿಯುವ ಸಾಧ್ಯತೆ ಇದೆ. ಅತ್ಯಾಚಾರದ ವಿರುದ್ದ ರಾಜ್ಯ ಸರ್ಕಾರದ ಜನ ಪ್ರತಿನಿಧಿಗಳು ಹಾಗು ಹೆಚ್ಚಿನ ಮುತುವರ್ಜಿವಹಿಸಿ ಕೆಲಸ ಮಾಡಬೇಕೆಂದರು. ಗೌರವಾಧ್ಯಕ್ಷ ರಾಜಪ್ಪ ನಗರಾಧ್ಯಕ್ಷ ಪಿ.ಮಧುಗೌಡ, ಉಪಾಧ್ಯಕ್ಷ ರಘು, ಮೋಹನ್ ಕುಮಾರ, ಖಜಾಂಚಿ ಗುರು, ಕಾರ್ಯದರ್ಶಿ ದಿವಕರ್, ಚಂದ್ರೇಗೌಡ ಸಂತೋಷ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

