ಇಂದು ಎನ್ನೆಸ್ಸೆಸ್ ಶಿಬಿರ
ಹಾವೇರಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಸಾಲಿನ ಎನ್ಎಸ್ಎಸ್ ವಾರ್ಷಿಕ ಶಿಬಿರ ಫೆ. 7ರಿಂದ 13ರ ವರೆಗೆ ತಾಲೂಕಿನ ಕೋಳೂರು ಗ್ರಾಮದಲ್ಲಿ ಜರುಗಲಿದೆ. ಶಿಬಿರದ ಉದ್ಘಾಟನಾ ಸಮಾರಂಭ ಫೆ. 7ರಂದು ಸಂಜೆ 4.30ಕ್ಕೆ ಜರುಗಲಿದೆ. ಜಿಪಂ ಅಧ್ಯಕ್ಷ ಶಂಕ್ರಣ್ಣ ಮಾತನವರ ಉದ್ಘಾಟಿಸುವರು. ಅತಿಥಿಗಳಾಗಿ ಸಂಸದ ಶಿವಕುಮಾರ ಉದಾಸಿ, ನಗರಸಭೆ ಅಧ್ಯಕ್ಷ ಜಗದೀಶ ಮಲಗೋಡ, ಉಪಾಧ್ಯಕ್ಷೆ ಲಲಿತಾ ಗುಂಡೇನಹಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಂದ್ರ ಕಟಕೋಳ, ಜಿಪಂ ಉಪಾಧ್ಯಕ್ಷೆ ಗೀತಾ ಅಂಕಸಖಾನಿ ಪಾಲ್ಗೊಳ್ಳುವರು. ಪ್ರತಿದಿನ ಸಂಜೆ ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಫೆ. 11ರಂದು ರಾತ್ರಿ 7ಕ್ಕೆ ಹಾವೇರಿ ಜಿಲ್ಲಾ ವಾರ್ತಾ ಇಲಾಖೆಯಿಂದ ಸರ್ಕಾರದ ವಿವಿಧ ಯೋಜನೆಗಳ ಕುರಿತು ಚಲನಚಿತ್ರ ಪ್ರದರ್ಶನ ಜರುಗಲಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

