ಹಣ, ಹೆಂಡ ಹಂಚೋರಿಗೆ ಸೋಲು ಖಚಿತ
ಕನ್ನಡಪ್ರಭ ವಾರ್ತೆ, ಹಾನಗಲ್ಲ, ಫೆ. 6
ಹಣ, ಹೆಂಡ ಹಂಚಿ ಚುನಾವಣೆ ಗೆಲ್ಲುವುದು ಈ ಬಾರಿ ಹಾನಗಲ್ಲ ತಾಲೂಕಿನಲ್ಲಿ ಸಾಧ್ಯವಿಲ್ಲ. ಪಕ್ಷ ನಿಷ್ಠೆ ಇಲ್ಲದೇ, ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದ ನಾಯಕರು ಈ ಚುನಾವಣೆಯಲ್ಲಿ ಸೋಲುಣ್ಣುವುದು ಖಚಿತ ಎಂದು ಹಾವೇರಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಮಾಜಿ ಅಧ್ಯಕ್ಷ ರವಿಕುಮಾರ ಬೆಲ್ಲದ ತಿಳಿಸಿದರು.
ಹಾನಗಲ್ಲಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಬಿಜೆಪಿ ಸದೃಢವಾಗಿದೆ. ಬಿಜೆಪಿ ಹೆಸರು ಹೇಳಿಕೊಂಡು ಅಧಿಕಾರ ಅನುಭವಿಸಿ ಈಗ ತಿರುಗಿ ಬೀಳುವ ದುಸ್ಸಾಹಸಕ್ಕೆ ಮುಂದಾಗಿದ್ದಾರೆ. ಇಂಥವರಿಗೆ ಮತದಾರರು ಪಾಠ ಕಲಿಸುತ್ತಾರೆ. ಮಾಜಿ ಸಚಿವರು, ಸಂಸದರಿಗೆ ಹಲವು ದಶಕಗಳಿಂದ ಬೆಂಬಲಿಸಿದ್ದು ವ್ಯರ್ಥವಾಗಿದೆ. ಯುವಕರನ್ನು ಕಡೆಗಣಿಸಿದ ಉದಾಸಿ ನಿಲುವು ಪ್ರತಿಭಟಿಸಿ ಹಾನಗಲ್ಲ ತಾಲೂಕಿನಲ್ಲಿ ದೊಡ್ಡ ಯುವ ಸಮೂಹವೇ ಈ ಬಾರಿ ಚುನಾವಣೆಯಲ್ಲಿ ಪಾಠ ಕಲಿಸಲಿದೆ ಎಂದರು.
ತಾಲೂಕಿಗೆ ತೀರ ಅವಶ್ಯವಾದ ಹಣ್ಣು ಸಂಸ್ಕರಣಾ ಘಟಕ ಸ್ಥಾಪಿಸುವ ಅಗತ್ಯವಿದೆ ಎಂದು ತೀಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಕಾಶ ಗೋದಿ, ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

