ನೀರು: ನಗರಸಭೆ ಎದುರು ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಹಾವೇರಿ, ಫೆ.8
ನಗರದ ಜನತೆಗೆ ಸಮರ್ಪಕ ಕುಡಿಯುವ ನೀರು ಪೂರೈಸದ ನಗರಸಭೆ ಆಡಳಿತ ಮಂಡಳಿಯ ನೀತಿ ಖಂಡಿಸಿ, ಎಲ್ಲ ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಆಗ್ರಹಿಸಿ ತಾಲೂಕು ಗ್ರಾಮೀಣ ಕಾಂಗ್ರೆಸ್ ಘಟಕದ ಕಾರ್ಯಕರ್ತರು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರಸಭೆ ಗೇಟ್ ಎದುರು ಖಾಲಿ ಕೊಡಗಳನ್ನಿಟ್ಟು ನಗರಸಭೆ ಅಧಿಕಾರಿ, ಸಿಬ್ಬಂದಿ, ಸದಸ್ಯರ ವಿರುದ್ಧ ಘೋಷಣೆ ಕೂಗಿದರು. ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ 2-3 ತಿಂಗಳಿಂದ ಕುಡಿಯುವ ನೀರು ಸಂಪೂರ್ಣ ಸ್ಥಗಿತಗೊಂಡಿದೆ. ಇರುವ ಕೊಳವೆಬಾವಿಗಳಲ್ಲಿ ಬಹಳಷ್ಟು ಹಾಳಾಗಿವೆ. ಜನರು ನಿತ್ಯ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಆದರೂ ನಗರಸಭೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಪ್ರತಿಭಟನೆಯಲ್ಲಿ ತಾಲೂಕು ಗ್ರಾಮೀಣ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಂ.ಎಂ. ಹಿರೇಮಠ, ಶಹರ ಘಟಕದ ಅಧ್ಯಕ್ಷ ಕೆ.ಎಸ್. ಪುರದ, ಮುಖಂಡರಾದ ಕೊಟ್ರೇಶಪ್ಪ ಬಸಗಣ್ಣಿ, ಮಾಜಿ ಶಾಸಕ ರುದ್ರಪ್ಪ ಲಮಾಣಿ, ಎಸ್ಎಫ್ಎನ್ ಗಾಜೀಗೌಡ್ರ, ಜಗದೀಶ ಬೆಟಗೇರಿ, ನಗರಸಭೆ ಸದಸ್ಯ ಬಾಬುಸಾಬ ಮೋಮಿನಗಾರ, ಜಮಾದಾರ, ಜಯಶ್ರೀ ಶಿವಪುರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

