ಹಾವೇರಿ

ಇಂದು ವಿಶೇಷ ಉಪನ್ಯಾಸ ಕಾರ್ಯಕ್ರಮ

Published On :

ಹಾವೇರಿ: ಕರ್ನಾಟಕ ವಿಶ್ವವಿದ್ಯಾಲಯ, ಸ್ನಾತಕೋತ್ತರ ಕೇಂದ್ರ, ಕೆರಿಮತ್ತಿ ಹಳ್ಳಿ, ಹಾವೇರಿ ಇದರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಫೆ. 13ರಂದು ಬೆಳಗ್ಗೆ 10.30ಕ್ಕೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
 ಬೆಂಗಳೂರಿನ ಹಿರಿಯ ಪತ್ರಕರ್ತರಾದ ಚಾಮರಾಜ ಸವಡಿ ಅವರು ಮಾಧ್ಯಮದ ಇಂದಿನ ಅಗತ್ಯತೆಗಳು ಮತ್ತು ಅವಕಾಶ ಕುರಿತಂತೆ ಹಾಗೂ ಧಾರವಾಡದ ಉಪನ್ಯಾಸಕರಾದ ಪ್ರೊ. ರುದ್ರೇಶ ಮೇಟಿ ಅವರು ಪತ್ರಿಕೋದ್ಯಮ ಬರವಣಿಗೆ ಮತ್ತು ಭಾಷೆ ಎಂಬ ವಿಷಯ ಕುರಿತಂತೆ ಉಪನ್ಯಾಸ ನೀಡುವರು.  ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಡಾ.ಟಿ.ಎಂ. ಭಾಸ್ಕರ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಇಂದಿನಿಂದ ತರಬೇತಿ
ಹಾವೇರಿ:  ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಹಾಗೂ ಜಿಪಂ ಸಹಯೋಗದಲ್ಲಿ, ಪರಿಸರ ಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಫೆ.13ರಿಂದ 15ರ ವರೆಗೆ ಮೂರು ದಿನಗಳ ಕಾಲ ಜರುಗಲಿದೆ.
 ಈ ತರಬೇತಿಯನ್ನು ಫೆ. 13ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ. ಫೆಬ್ರವರಿ13ರಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ, ಫೆ.14ರಂದು ಗ್ರಾಮಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಹಾಗೂ ಫೆಬ್ರವರಿ 15ರಂದು ಸ್ತ್ರೀ ಶಕ್ತಿ ಸಂಘದ ಸದಸ್ಯರುಗಳಿಗೆ ಈ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.