ಹಾವೇರಿ

ಶಾಸಕ ಕಾಶಪ್ಪನವರ ಬಂಧಿಸಿ

Published On :

ಹಾವೇರಿ: ಪೊಲೀಸ್ ಪೇದೆಗಳ ಮೇಲೆ ದೌರ್ಜನ್ಯ ನಡೆಸಿದ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.
ಇಂಥ ಘಟನೆಗಳು ಮರುಕಳಿಸುವ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಇನ್ನೂ ಹದಗೆಡುವ ಸಂಭವವಿದ್ದು, ಕಾಶಪ್ಪನವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಜನರು ಪೊಲೀಸ್ ಇಲಾಖೆ ಮೇಲೆ ಇಟ್ಟಿರುವ ವಿಶ್ವಾಸ, ಗೌರವವನ್ನು ಉಳಿಸಬೇಕು ಎಂದು ಆಗ್ರಹಿಸಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರದೀಪ ಮುಳ್ಳೂರ ಮಾತನಾಡಿ, ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದಂತಹ ಹುನಗುಂದದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ಇವರ ಸ್ನೇಹಿತ ರೌಡಿ ಶೀಟರ್ ಸೋಮಶೇಖರಗೌಡ ಹಾಗೂ ಬೆಂಬಲಿಗರು ಬೆಂಗಳೂರಿನಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಕೃಪಾಶೀರ್ವಾದದ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಶಾಸಕರು ಇಂತಹ ಕೃತ್ಯಗಳನ್ನು ಎಸಗುವಲ್ಲಿ ಹಿಂದೆ ಮುಂದೆ ನೋಡದೆ ಕಾನೂನು ಸುವ್ಯವಸ್ಥೆ ಕದಡುವಲ್ಲಿ ನಿರತರಾಗಿದ್ದಾರೆ. ರಾಜ್ಯದ ಗೃಹ ಸಚಿವರು ಈ ವಿಷಯಕ್ಕೆ ಸಂಬಂಧವಿಲ್ಲದವರಂತೆ ಸುಮ್ಮನೆ ಕುಳಿತಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದ್ದು, ಜನರಿಗೆ ರಕ್ಷಣೆ ನೀಡುವಂತಹ ಪೊಲೀಸರ ಮೇಲೆ ಒಬ್ಬ ಜನಪ್ರತಿನಿಧಿ ಕುಡಿದ ಅಮಲಿನಲ್ಲಿ ಹಲ್ಲೆ ಮಾಡಿರುವುದನ್ನು ನೋಡಿದರೆ ಈ ಸರ್ಕಾರದಿಂದ ಯಾವ ರಕ್ಷಣೆ ಬಯಸಲಾದೀತು ಎಂಬುದು ಗೊತ್ತಾಗುತ್ತದೆ. ಗೂಂಡಾಗಿರಿ ಮೆರೆದ ಶಾಸಕನ ಶಾಸಕತ್ವವನ್ನು ಅಸಿಂಧುಗೊಳಿಸಿ ಕೂಡಲೇ ಕಾಶಪ್ಪನವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ತಹಸೀಲ್ದಾರ್ ಪಂಪನಗೌಡ ಮೇಲ್ಸೀಮೆ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರಕಾಶ ಉಜನಿಕೊಪ್ಪ, ಹುಸೇನಸಾಬ್ ನದಾಫ್, ಅಚ್ಯುತ್ ಹೆಸರೂರ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.