ಕೊಡಗು

ಮೊಯ್ಲಿ ಪ್ರಯತ್ನ ಕಾರಣ: ಕಾಂಗ್ರೆಸ್

Published On :

ಜ ಮ್ಮಾ ಬಾಣೆ ಪ್ರದೇಶಗಳೆಲ್ಲವೂ 'ಡೀಮ್ಡ್ ಫಾರೆಸ್ಟ್‌' ಎಂದು ಭೂ ಹಿಡುವಳಿದಾರರನ್ನು ಅರಣ್ಯ ಇಲಾಖೆ ಗೊಂದಲಕ್ಕೆ ಸಿಲುಕಿಸಿದ್ದು, ಇದೀಗ ರಾಷ್ಟ್ರಪತಿಯವರು ವಿಧೇಯಕಕ್ಕೆ ಅಂಕಿತ ಹಾಕುವುದರೊಂದಿಗೆ ಗೊಂದಲಕ್ಕೆ ತೆರೆ ಬಿದ್ದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ. ಪ್ರದೀಪ್ ಹರ್ಷ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮಾ ಬಾಣೆಯ ಮಾಲೀಕತ್ವ ನೀಡಬೇಕೆನ್ನುವ ಹಿಡುವಳಿದಾರರ ಬಹುಕಾಲದ ಬೇಡಿಕೆ ಇದೀಗ ಈಡೇರಿದಂತಾಗಿದೆ. ಇದಕ್ಕೆ ಕಾರಣರಾದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಸಂಸದ ಎಚ್. ವಿಶ್ವನಾಥ್ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.
ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಒದಗಿಸಿದ ಹಿರಿಯ ರಾಜಕಾರಣಿ ಎ.ಕೆ. ಸುಬ್ಬಯ್ಯ, ಪಿ.ಸಿ. ಹಸೈನಾರ್ ಸೇರಿದಂತೆ ಹಲ ಗಣ್ಯರಿಗೆ ಇದೇ ಸಂದರ್ಭ ಕೃತಜ್ಞತೆಗಳನ್ನು ಪ್ರದೀಪ್ ತಿಳಿಸಿದರು.
ಕೇಂದ್ರದ ಗೃಹ ಸಚಿವಾಲಯದ ಮುಂದಿದ್ದ ಜಮ್ಮಾ ಸಮಸ್ಯೆ ವಿಧೇಯಕದ ಮಾಹಿತಿಯನ್ನು ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮತ್ತು ಸಂಸದ ಎಚ್. ವಿಶ್ವನಾಥ್ ಅವರು ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಿಕೊಟ್ಟ ಪ್ರಯತ್ನಗಳ ಹಿನ್ನೆಲೆಯಲ್ಲಿ ಇದೀಗ ಸಮಸ್ಯೆ ಬಗೆಹರಿದಿರುವುದಾಗಿ ಹೇಳಿದರು. ಜಿಲ್ಲೆಯ ಇಬ್ಬರು ಶಾಸಕರು ವಿಧೇಯಕ ಅಂಗೀಕಾರಕ್ಕೆ ಪ್ರಯತ್ನಿಸಿದ್ದು, ಇವರ ಪ್ರಯತ್ನಕ್ಕೆ ರಾಜ್ಯದ ಸರ್ವ ಪಕ್ಷಗಳ ಸಹಕಾರ ನೀಡಿದ್ದರಿಂದ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕುವಂತಾಗಿ, ರಾಜ್ಯಪಾಲರಿಗೆ ಕಳುಹಿಸಿಕೊಡಲಾಯಿತು ಎಂದು ತಿಳಿಸಿದರು.
ಮೈಸೂರು- ಕುಶಾಲನಗರ ರೇಲ್ವೆ ಯೋಜನೆಗೆ ಕೇಂದ್ರ ಅನುದಾನ ಒದಗಿಸಿದರೆ, ರಾಜ್ಯ ಸರ್ಕಾರ ರೇಲ್ವೆ ಮಾರ್ಗ ನಿರ್ಮಾಣಕ್ಕೆ ಅಗತ್ಯ ಜಮೀನನ್ನು ನೀಡುವಂತೆ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂಸದ ವಿಶ್ವನಾಥ್ ಮನವಿ ಮಾಡಿದ್ದರು. ಆದರೆ, ಮುಖ್ಯಮಂತ್ರಿಗಳ ಬದಲಾವಣೆಯಿಂದ ಈ ಯೋಜನೆ ನೆನೆಗುದಿಗೆ ಬಿದ್ದಿತು. ಪ್ರಸ್ತುತ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಮನವಿ ಮಾಡಿಕೊಂಡ ಮೇರೆಗೆ ಶೆಟ್ಟರ್ ಇದೀಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲು ಸೂಚಿಸಿದ್ದಾರೆ ಎಂದು ಪ್ರದೀಪ್ ತಿಳಿಸಿದರು.
ಕೆ.ಪಿ. ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಸದಸ್ಯ ಎಂ.ಕೆ. ನಜೀರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.