ಕೊಡಗು

ಆರ್‌ಟಿಐ: 19ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

Published On :

ಮಡಿಕೇರಿ: ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲಾ ದಾಖಲಾತಿ ಕೋರಿ ಪೋಷಕರು ಅರ್ಜಿ ಸಲ್ಲಿಸಲು ಫೆ.19ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಹಿಂದೆ ಫೆ.5ರವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದನ್ನು ಪರಿಷ್ಕರಿಸಿ ಫೆ.19ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಹರು ಇದರ ಪ್ರಯೋಜನ ಪಡೆಯುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಚ್. ಬಸವರಾಜು ಕೋರಿದ್ದಾರೆ.
ಕ್ರೀಡೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ ಇಂದು
ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೊಡಗು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಗಿರಿಜನ ಉಪಯೋಜನೆ ಅಡಿಯಲ್ಲಿ ಫೆ.5ರಂದು ಬೆಳಗ್ಗೆ 11.30 ಗಂಟೆಗೆ ಕೂಡಿಗೆಯ ಕ್ರೀಡಾ ಶಾಲೆಯಲ್ಲಿ ಕ್ರೀಡೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಜಿ.ಪಂ. ಅಧ್ಯಕ್ಷ ಬಿ.ಶಿವಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಸುಂಟಿಕೊಪ್ಪ: 12, 13ರಂದು ವಾರ್ಷಿಕೋತ್ಸವ
ಸುಂಟಿಕೊಪ್ಪ: ಇಲ್ಲಿನ ಮಾದಾಪುರ ರಸ್ತೆಯಲ್ಲಿರುವ ವೃಕ್ಷೋದ್ಭವ ಶ್ರೀಶಕ್ತಿ ಮಹಾಗಣಪತಿ ದೇವಸ್ಥಾನದ 9ನೇ ವಾರ್ಷಿಕೋತ್ಸವ 12, 13ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನಡೆಯಲಿದೆ. 12ರಂದು ರಾತ್ರಿ 8ರಿಂದ 1 ಗಂಟೆವರೆಗೆ ಅಘೋರ ಸುದರ್ಶನ ಹೋಮ ನಡೆಯಲಿದೆ. 13ರಂದು ಬೆಳಗ್ಗೆ 6.30ಕ್ಕೆ ಪ್ರಾರ್ಥನೆ, 9 ಗಂಟೆಗೆ ಪಂಚಾಮೃತಾಭಿಷೇಕ, ಗಣಪತಿ ಅಧರ್ವ ಶೀರ್ಷ ಅಭಿಷೇಕ, 10.30ಕ್ಕೆ ಸ್ವಸ್ತಿ ಪುಣ್ಯಾವಾಚನ 12 ಕಾಯಿ ಗಣಹೋಮ, 12.30ಕ್ಕೆ ಪೂರ್ಣಾಹುತಿ, 1 ಗಂಟೆಗೆ ಮಹಾಮಂಗಳಾರತಿ, ಅನ್ನಸಂತರ್ಪಣೆ, ಸಂಜೆ 6 ಗಂಟೆಗೆ ದೂರ್ವಾರ್ಚನೆ, 8 ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.