ಕೊಡಗು

ಉಸ್ತುವಾರಿ ಸಚಿವರ ರಾಜಿನಾಮೆಗೆ ಆಗ್ರಹ

Published On :

ಕುಶಾಲನಗರ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಕುಟುಂಬ ಸದಸ್ಯರು ಅಕ್ರಮ ಆಸ್ತಿಗಳಿಸಿರುವ ಬಗ್ಗೆ ಆರೋಪ ವ್ಯಕ್ತಪಡಿಸಿರುವ ಜಿಲ್ಲಾ ಜೆಡಿಎಸ್ ಅಧ್ಯಕ್ಷ ವಿ.ಪಿ. ಶಶಿಧರ್, ಸಚಿವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಅವರು ಕುಶಾಲನಗರದಲ್ಲಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾಡಳಿತದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸಚಿವರ ಸಹೋದರರೊಬ್ಬರು ಬೇನಾಮಿ ಹೆಸರಿನಲ್ಲಿ ದಾಖಲೆ ಸೃಷ್ಟಿಸಿ ಅಕ್ರಮ ಭೂಮಿ ಹೊಂದಿದ್ದಾರೆ. ಎರಡು ಕ್ಷೇತ್ರಗಳು ಬಿಜೆಪಿ ಜನಪ್ರತಿನಿಧಿಗಳನ್ನು ಹೊಂದಿದ್ದು, ಪ್ರಕರಣದ ಬಗ್ಗೆ ತಮಗೆ ಸಂಬಂಧವಿಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಅಕ್ರಮ ಸಕ್ರಮ ನಿಯಮವನ್ನು ಗಾಳಿಗೆ ತೂರಿ ಸಚಿವರ ಸೋದರರು ಭೂ ದಂಧೆಯಲ್ಲಿ ತೊಡಗಿದ್ದರು ಮೌನ ವಹಿಸಿದ್ದಾರೆ ಎಂದರು. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ಮುಟ್ಟುಗೋಲು ಹಾಕುವಂತೆ ಆಗ್ರಹಿಸಿದ್ದಾರೆ. ಪಕ್ಷದ ಕುಶಾಲನಗರ ಹೋಬಳಿ ಅಧ್ಯಕ್ಷ ಎಂ.ಎಸ್. ರಾಜೇಶ್,  ನಗರಾಧ್ಯಕ್ಷ ವಿ.ಎನ್. ಮಹೇಶ್, ಕೃಷ್ಣೋಜಿರಾವ್, ಎಚ್.ಡಿ. ಚಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.