ಕೊಡಗು

ಇಂದು ಕಾವೇರಿ ತಾಲೂಕು ಹೋರಾಟ

Published On :

ಕೇಂದ್ರ ಸಮಿತಿ ಸಭೆ
ಕುಶಾಲನಗರ: ರಾಜ್ಯದಲ್ಲಿ ನೂತನ ತಾಲೂಕುಗಳ ರಚನೆ ಪಟ್ಟಿಯಲ್ಲಿ ಕೊಡಗು ಜಿಲ್ಲೆಯ ಕುಶಾಲನಗರ ಕಾವೇರಿ ತಾಲೂಕನ್ನು ಸರ್ಕಾರ ಕೈ ಬಿಟ್ಟಿರುವ ಬಗ್ಗೆ ನೂತನ ಕಾವೇರಿ ತಾಲೂಕು ಹೋರಾಟ ಕೇಂದ್ರ ಸಮಿತಿಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುರ್ತು ಸಭೆ- ಕಾವೇರಿ ತಾಲೂಕು ರಚನಾ ಹೋರಾಟ ಕೇಂದ್ರಿಯ ಸಮಿತಿಯ ಪದಾಧಿಕಾರಿಗಳ ತುರ್ತು ಸಭೆ ಕುಶಾಲನಗರದ ಕುಶಾಲನಗರ ಕನ್ನಿಕಾ ಇಂಟರ್‌ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ  ನಡೆಯಲಿದೆ ಎಂದು ಕೇಂದ್ರ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ತಿಳಿಸಿದ್ದಾರೆ.
ಇಂದಿನಿಂದ ಟೆನಿಸ್‌ಬಾಲ್ ಕ್ರಿಕೆಟ್
ಸುಂಟಿಕೊಪ್ಪ: ಇಲ್ಲಿನ ಸಮೀಪದ ಗರಗಂದೂರು ಬಿ. ಹೊಸತೋಟದ ಚೇತನ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಪ್ರಥಮ ವರ್ಷದ ಚೇತನ್ ಕಪ್- 2013 ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು 9 ರಿಂದ 11ರ ವರೆಗೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿನ್ಸಿ ಹೇಳಿದರು. ನ್ಯೂಸ್ ಗ್ಯಾಲರಿ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ರೀಡಾ ಜಿಲ್ಲೆ ಎನಿಸಿರುವ ಕೊಡಗು ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದ ಯುವ ಕ್ರೀಡಾ ಪಟುಗಳಿಗೆ ಉತ್ತೇಜನ ನೀಡಲು ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.