ನಿವೇಶನ ನೀಡಲು ಆಗ್ರಹ: ನಾಳೆ ಪ್ರತಿಭಟನೆ
ವಿರಾಜಪೇಟೆ: ಪಟ್ಟಣದ ಸುತ್ತಮುತ್ತ ವಾಸಿಸುವ ನೂರಾರು ಕಡು ಬಡವರಿಗೆ ಮನೆ ಕಟ್ಟಲು ನಿವೇಶನ ನೀಡುವಂತೆ ಆಗ್ರಹಿಸಿ 13ರಂದು ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ವಿರಾಜಪೇಟೆ ಶಾಖೆ ಕಾರ್ಯದರ್ಶಿ ಎಂ.ಕೆ. ಮೋಹನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಬಡವರು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಬಾಡಿಗೆ ನೀಡಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಗ್ರಾಮ ಮಟ್ಟದಲ್ಲಿ ನಿವೇಶನ ರಹಿತರನ್ನು ಗುರುತಿಸಿ ನಿವೇಶನ ನೀಡುವಂತೆ ಅರ್ಜಿ ಸಲ್ಲಿಸಲಾಗಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಜನರ ಅರ್ಜಿಯನ್ನು ಸಲ್ಲಿಸಲು ಮೆರವಣಿಗೆ ಮೂಲಕ ತೆರಳಲಾಗುವುದು ಎಂದು ಹೇಳಿದರು. ಜಿಲ್ಲಾ ಕಾರ್ಯದರ್ಶಿ ಕೆ.ವಿ. ಸುನೀಲ್ ಮಾತನಾಡಿ, ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಮುಷ್ಕರದಿಂದ ರೋಗಿಗಳು ತತ್ತರಿಸಿ ಹೋಗಿದ್ದಾರೆ. ಸರ್ಕಾರ ಕೂಡಲೆ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥಗೊಳಿಸಬೇಕು. ಎಂದು ಹೇಳಿದರು. ಗೋಷ್ಠಿಯಲ್ಲಿ ಖಜಾಂಚಿ ಎಚ್.ಕೆ. ರಾಜು, ಶರೀಷ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

