ಮಾಹಿತಿ ಹಕ್ಕು ಕಾಯ್ದೆಯಡಿ 370 ಅರ್ಜಿ
ಮಡಿಕೇರಿ: ಮಾಹಿತಿ ಹಕ್ಕು ಕಾಯ್ದೆಯಡಿ ಕೊಡಗು ಜಿಲ್ಲೆಯ ನಾನಾ ಇಲಾಖೆಗಳಿಗೆ 2012ರ ಏ.1ರಿಂದ 2013ರ ಜ.31ರ ವರೆಗೆ ಸುಮಾರು 370 ಅರ್ಜಿ ಸಲ್ಲಿಕೆಯಾಗಿವೆ.
ಕಂದಾಯ, ಪೌರಾಡಳಿತ, ಪಂಚಾಯತ್ ರಾಜ್, ಶಿಕ್ಷಣ ಮತ್ತಿತರ ಇಲಾಖೆಗಳಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದು ಸಂಬಂಧಪಟ್ಟ ಇಲಾಖೆಗಳಿಂದ ಲಭ್ಯವಿರುವ ಮಾಹಿತಿ ದೊರೆತಿದೆ.
ಮಾಹಿತಿಹಕ್ಕು ಕಾಯ್ದೆ ಬಗ್ಗೆ...: ಈ ಅಧಿನಿಯಮದಡಿ ಮಾಹಿತಿಗಾಗಿ ಸಲ್ಲಿಸಿದ ಅರ್ಜಿ ಅಥವಾ ಮೇಲ್ಮನವಿ ಸ್ವೀಕರಿಸಲು ಕೇಂದ್ರ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ರಾಜ್ಯ ಸಾರ್ವಜನಿಕ ಸಹಾಯಕ ಮಾಹಿತಿ ಅಧಿಕಾರಿಯಿಂದ ಮಾಹಿತಿ ಪಡೆಯಬಹುದಾಗಿದೆ.
ಈ ಅಧಿನಿಯಮದಡಿ ದಾಖಲೆಗಳಿಗಾಗಿ ಕೋರುವುದಕ್ಕೆ ಅಥವಾ ದಾಖಲೆಗಳನ್ನು ಪಡೆಯುವುದಕ್ಕೆ ಸಂಬಂಧಿಸಿದ ಯಾವುದೇ ಇತರ ವಿಷಯದ ಸಂಬಂಧದಲ್ಲಿ ಯಾರೇ ವ್ಯಕ್ತಿಯಿಂದ ಈ ಅಧಿನಿಯಮದ ಉಪಬಂಧಗಳಿಗೊಳಪಟ್ಟ ಫಿರ್ಯಾದು ಸ್ವೀಕರಿಸಿ ವಿಚಾರಣೆ ನಡೆಸುವುದು ಕೇಂದ್ರ ಮಾಹಿತಿ ಆಯೋಗದ ಅಥವಾ ಸಂದರ್ಭನುಸಾರ, ರಾಜ್ಯ ಮಾಹಿತಿ ಆಯೋಗದ ಕರ್ತವ್ಯ.
ಕಾರಣಗಳಿದ್ದರೆ ವಿಚಾರಣೆ: ಕೇಂದ್ರ ಮಾಹಿತಿ ಆಯೋಗ ಅಥವಾ ಸಂದರ್ಭನುಸಾರ, ರಾಜ್ಯ ಮಾಹಿತಿ ಆಯೋಗ ಈ ವಿಷಯದ ಬಗ್ಗೆ ವಿಚಾರಣೆ ನಡೆಸುವುದಕ್ಕೆ ಸೂಕ್ತ ಕಾರಣಗಳಿವೆಯೆಂದು ಮನಗಂಡರೆ, ಅದು ಆ ಸಂಬಂಧದಲ್ಲಿ ವಿಚಾರಣೆ ಪ್ರಾರಂಭಿಸಬಹುದಾಗಿದೆ.
ಮಾಹಿತಿ ಆಯೋಗ ಅಥವಾ ಸಂದರ್ಭನುಸಾರ, ರಾಜ್ಯ ಮಾಹಿತಿ ಆಯೋಗ, ಈ ಅಧಿನಿಯಮದಡಿ ಯಾವುದೇ ದೂರನ್ನು ವಿಚಾರಣೆ ಮಾಡುವ ಅವಧಿಯಲ್ಲಿ ಈ ಅಧಿನಿಯಮ ಅನ್ವಯಿಸುವ ಸಾರ್ವಜನಿಕ ಪ್ರಾಧಿಕಾರದ ನಿಯಂತ್ರಣದಲ್ಲಿರುವ ಯಾವುದೇ ದಾಖಲೆ ಪರೀಕ್ಷಿಸಬಹುದು ಮತ್ತು ಅಂತಹ ದಾಖಲೆಗಳ ಮಾಹಿತಿ ಒದಗಿಸಲಿದ್ದಾರೆ.
ಮೇಲ್ಮನವಿ: 7ನೇ ಪ್ರಕರಣದ 1ನೇ ಉಪ-ಪ್ರಕರಣದಲ್ಲಿ ಅಥವಾ 3ನೇ ಉಪ ಪ್ರಕರಣದ ಖಂಡದಲ್ಲಿ ನಿರ್ದಿಷ್ಟಪಡಿಸಲಾದ ಸಮಯದೊಳಗೆ ನಿರ್ಣಯ ಸ್ವೀಕರಿಸದಿರುವಂತ ಅಥವಾ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯ ಅಥವಾ ಸಂದರ್ಭನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯ ನಿರ್ಣಯ ಸ್ವೀಕರಿಸಿದ ದಿನದಿಂದ 30 ದಿನಗಳೊಳಗೆ ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರದಲ್ಲಿ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಸಂದರ್ಭನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಗಿಂತ ಹಿರಿಯ ದರ್ಜೆಯ ಅಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು.
ಆದರೆ ಮೇಲ್ಮನವಿದಾರ, ಸಕಾಲದಲ್ಲಿ ಮೇಲ್ಮನವಿ ಸಲ್ಲಿಸಲು ಸಾಕಷ್ಟು ಕಾರಣದಿಂದ ಪ್ರತಿಬಂಧಿತನಾಗಿದ್ದಾನೆಂದು ಅಧಿಕಾರಿಗೆ ಮನದಟ್ಟಾದರೆ ಅಂತ ಅಧಿಕಾರಿ 30 ದಿನಗಳ ಅವಧಿ ಮುಗಿದ ತರುವಾಯ ಮೇಲ್ಮನವಿ ಸ್ವೀಕರಿಸಬಹುದು.
ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಸಂದರ್ಭನುಸಾರ, ಒಬ್ಬರಾಜ್ಯ ಮಾಹಿತಿ ಅಧಿಕಾರಿ ಮೂರನೇ ಪಕ್ಷಕಾರನ ಮಾಹಿತಿ ಬಹಿರಂಗಪಡಿಸುವಂತೆ 11ನೇ ಪ್ರಕರಣದ ಮೇರೆಗೆ ಮಾಡಿದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದಲ್ಲಿ ಸಂಬಂಧಪಟ್ಟ ಮೂರನೇ ಪಕ್ಷದಾರನು ಆದೇಶದ ದಿನಾಂಕದಿಂದ 30 ದಿನಗಳೊಳಗೆ ಮೇಲ್ಮನವಿ ಸಲ್ಲಿಸಬೇಕು.
ದಂಡನೆಗಳು: ಕೇಂದ್ರ ಮಾಹಿತಿ ಆಯೋಗ ಅಥವಾ ಸಂದರ್ಭನುಸಾರ ರಾಜ್ಯ ಮಾಹಿತಿ ಆಯೋಗ ಯಾವುದೇ ದೂರು ಅಥವಾ ಕೋರಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಮಯದಲ್ಲಿ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಸಂದರ್ಭನುಸಾರ, ರಾಜ್ಯ ಸಾರ್ವಜನಿಕ ಮಾಹಿತಿಯ ಅಧಿಕಾರಿ, ಯಾವುದೇ ಯುಕ್ತ ಕಾರಣವಿಲ್ಲದೆ ಮಾಹಿತಿ ಕೋರಿ ಸಲ್ಲಿಸಿದ ಅರ್ಜಿ ಸ್ವೀಕರಿಸಲು ನಿರಾಕರಿಸಿದೆ.
ಕೇಂದ್ರ ಮಾಹಿತಿ ಆಯೋಗ ಅಥವಾ ಸಂದರ್ಭನುಸಾರ ರಾಜ್ಯ ಮಾಹಿತಿ ಆಯೋಗ ಯಾವುದೇ ದೂರು ಅಥವಾ ಮನವಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಮಯದಲ್ಲಿ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಸಂದರ್ಭನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ ಯಾವುದೇ ಯುಕ್ತ ಕಾರಣವಿಲ್ಲದೆ ಹಾಗೂ ಸತತವಾಗಿ ಮಾಹಿತಿ ಕೋರಿ ಸಲ್ಲಿಸಿದ ಅರ್ಜಿ ಸ್ವೀಕರಿಸಲು ವಿಫಲವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

