ಅನಾಥಾಶ್ರಮಗಳಿಗೆ ಭೇಟಿ, ಪರಿಶೀಲನೆ
ಮಡಿಕೇರಿ: ಕೊಡಗು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ. ಸಣ್ಣುವಂಡ ಎಂ. ಕಾವೇರಪ್ಪ, ಸದಸ್ಯರಾದ ಸಿದ್ಧರಾಜು ಬೆಳ್ಳಯ್ಯ ಹಾಗೂ ಬಿ.ಎಸ್. ಸತೀಶ್ ಅವರನ್ನೊಳಗೊಂಡ ತಂಡ ಕೊಡಗು ಜಿಲ್ಲೆಯಲ್ಲಿ ಮಕ್ಕಳ ಪಾಲನೆ ಮತ್ತು ಪೋಷಣೆ ಮಾಡುತ್ತಿರುವ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದ ನಿರ್ಗತಿಕ ಮಕ್ಕಳ ಕುಟೀರ, ಬಾಳುಗೋಡು ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆ ಮತ್ತು ಪೆರುಂಬಾಡಿಯಲ್ಲಿರುವ ಶಂಶುಲ್ ಉಲಾಮ ಎಡ್ಯುಕೇಷನ್ ಅಕಾಡೆಮಿ, ಬನತ್ ಯತೀಮ್ ಖಾನ್ ಅನಾಥಾಶ್ರಮಕ್ಕೆ ಅನಿರೀಕ್ಷಿತ ಭೇಟಿ ನೀಡಿ ಸಂಸ್ಥೆಯ ಚಟುವಟಿಕೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಸಂದರ್ಭ ಕಂಡುಬಂದ ನ್ಯೂನತೆಗಳನ್ನು ಸಂಸ್ಥೆಯವರ ಗಮನಕ್ಕೆ ತಂದು ಮಕ್ಕಳಿಗೆ ಉತ್ತಮ ಸೌಕರ್ಯ ಒದಗಿಸಿಕೊಡುವಂತೆ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಮಕ್ಕಳನ್ನು ದಾಖಲಿಸಿಕೊಳ್ಳುವಾಗ ಪ್ರತಿ ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ನಂತರವೇ ದಾಖಲಿಸಿಕೊಳ್ಳಬೇಕು ಎಂದು ಮಡಿಕೇರಿಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಮಡಿಕೇರಿ: ಬಾಲ ನ್ಯಾಯ ಮಂಡಳಿ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2000 ತಿದ್ದುಪಡಿ 2006ರ ಅನ್ವಯ ಪ್ರತಿ ಜಿಲ್ಲೆಗಳಲ್ಲಿ ಮಕ್ಕಳ ಕಲ್ಯಾಣ ಸಮಿತಿ ಮತ್ತು ನ್ಯಾಯ ಮಂಡಳಿಗಳನ್ನು ರಚಿಸಬೇಕಾಗಿರುತ್ತದೆ. ಈ ಸಮಿತಿಗಳಿಗೆ ಅಕ್ಟೋಬರ್ 2013ರಿಂದ ಅಕ್ಟೋಬರ್ 2016ರವರೆಗೆ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲ ನ್ಯಾಯ ಮಂಡಳಿ ಸದಸ್ಯತ್ವಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು 35ರಿಂದ 60 ವರ್ಷ ವಯೋವುತಿಗೊಳಪಟ್ಟಿರಬೇಕು. ವಿದ್ಯಾರ್ಹತೆ ಸಮಾಜಶಾಸ್ತ್ರ, ಸಮಾಜಕಾರ್ಯ, ಮಕ್ಕಳ ಮನಶಾಸ್ತ್ರ, ಕಾನೂನು, ಮಕ್ಕಳ ಅಭಿವೃದ್ಧಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಡಿಕೇರಿ- ದೂರವಾಣಿ ಸಂಖ್ಯೆ- 08272-228010 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

