ಸ್ಕೌಟ್ಸ್, ಗೈಡ್ಸ್ ರ್ಯಾಲಿ ಮುಕ್ತಾಯ
ಸೋಮವಾರಪೇಟೆ: ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವೆ ಹಾಗೂ ದೇಶಾಭಿಮಾನ ಮೂಡಿಸುವ ಮೂಲಕ ಅವರ ಸಂಪನ್ಮೂಲಗಳನ್ನು ಕ್ರೋಢೀಕರಿಸಿದ್ದಲ್ಲಿ ಭವಿಷ್ಯದ ರಾಷ್ಟ್ರ ಬಲಿಷ್ಠವಾಗುವುದರಲ್ಲಿ ಸಂಶಯವಿಲ್ಲ ಎಂದು ಸಮಾಜ ಸೇವಕ ಕೊಡ್ಲಿಪೇಟೆಯ ಕೆ.ಎನ್. ವಸಂತ್ ಅಭಿಪ್ರಾಯಪಟ್ಟರು.
ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ತಾಲೂಕು ಸಂಸ್ಥೆಯ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ತಾಲೂಕು ಮಟ್ಟದ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿಗಳು ಶಿಸ್ತಿನಿಂದ ಸೇವೆಯನ್ನು ಮಾಡಿದ್ದಲ್ಲಿ ಅದರ ಕೀರ್ತಿ ಆ ಶಾಲೆಗೆ ಹಾಗೂ ಪೋಷಕರಿಗೆ ಸಿಕ್ಕಿದಂತಾದರೆ, ವಿದ್ಯಾರ್ಥಿಯನ್ನು ಇಡೀ ಸಮಾಜವೇ ಗೌರವಿಸುತ್ತದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಮೇಲು- ಕೀಳು, ಜಾತಿ- ಬೇಧಗಳೆಂಬ ತಾರತಮ್ಯವಿಲ್ಲದೆ ಇರುವುದರಿಂದ ಇಂಥ ರ್ಯಾಲಿ, ಮೇಳಗಳು ಹೆಚ್ಚು-ಹೆಚ್ಚಾಗಿ ನಡೆದಲ್ಲಿ ಸಮಾನತೆಯಿಂದ ಕೂಡಿದ ಸಮಾಜವನ್ನು ಕಾಣಬಹುದೆಂದರು. ದೇಶದ ಉಜ್ವಲ ಭವಿಷ್ಯಕ್ಕಾಗಿ ರ್ಯಾಲಿ ಆಯೋಜಿಸುತ್ತಿರುವವರ ಕಾರ್ಯವನ್ನು ಶ್ಲಾಘಿಸಿದರು.
ಸಮಾರಂಭದ ದಿವ್ಯ ಸಾನಿಧ್ಯವನ್ನು ಕೊಡ್ಲಿಪೇಟೆ ಕಲ್ಲುಮಠದ ಮಠಾಧೀಶ ಶ್ರೀ ಮಹಾಂತ ಸ್ವಾಮೀಜಿ ವಹಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತವಾರಿ ಸಚಿವ ಅಪ್ಪಚ್ಚು ರಂಜನ್ ವಹಿಸಿದ್ದರು. ಸಭೆಯು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ತಾಲೂಕು ಸಂಸ್ಥೆಯ ಅಧ್ಯಕ್ಷ ಎನ್.ಕೆ. ಶ್ರೀಪತಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳಿಗೆ ಗಣ್ಯರು ಅರ್ಹತಾ ಪತ್ರವನ್ನು ವಿತರಿಸಿದರು. ವೇದಿಕೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಜಿಲ್ಲಾ ಗೈಡ್ಸ್ ಆಯುಕ್ತೆ ಡಾಟಿ ಕಾವೇರಪ್ಪ, ರಾಜ್ಯ ಸಮಿತಿ ಸದಸ್ಯೆ ಮಾರ್ಗರೆಟ್ ಲಸ್ರಾದೊ, ತಾಪಂ ಸದಸ್ಯೆ ಪೂರ್ಣಿಮಾ ಗೋಪಾಲ್, ಪ.ಪಂ. ಉಪಾಧ್ಯಕ್ಷೆ ನಳಿನಿ ಗಣೇಶ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಸ್. ಮಹೇಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಮುಖರಾದ ಪಿ.ಎ. ಐಯ್ಯಣ್ಣ, ಜಿ. ಸುಕುಮಾರ್, ರಂಜಿತ್, ತಾಲೂಕು ಸಂಸ್ಥೆಯ ಉಪಾಧ್ಯಕ್ಷೆ ಸುಮಾ ಸುದೀಪ್, ಕಾಯಂ ಸದಸ್ಯರಾದ ಲೋಕೇಶ್ವರಿ ಗೋಪಾಲ್, ಲೀಲಾ ನಿರ್ವಾಣಿ, ಉಷಾ ತೇಜಸ್ವಿ, ರ್ಯಾಲಿಯ ನಾಯಕ ಸುರೇಶ್ ಕುಮಾರ್ ಇದ್ದರು. ಬಿ.ಎ. ಭಾಸ್ಕರ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

