ಕೊಡಗು

ಮುಷ್ಕರಕ್ಕೆ ಪೂರ್ಣ ಬೆಂಬಲ-ಎಐಟಿಯುಸಿ

Published On :

ಮಡಿಕೇರಿ: ಬೆಲೆ ಏರಿಕೆ ಒಳಗೊಂಡಂತೆ ಕಾರ್ಮಿಕ ಸಮೂಹದ ಮೂಲಭೂತ ಪ್ರಶ್ನೆಗಳನ್ನು ಮುಂದಿರಿಸಿಕೊಂಡು ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ನೀಡಿರುವ 20 ಮತ್ತು 21ರ ಅಖಿಲ ಭಾರತ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಎಐಟಿಯುಸಿ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಪ್ಪ, ಕಾರ್ಮಿಕರ ಮೂಲಭೂತ ಸಮಸ್ಯೆಗಳ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರು ಸೂಕ್ತ ಸ್ಪಂದನ ದೊರಕಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆಎಸ್‌ಆರ್‌ಟಿಸಿ ಚಾಲಕರ ಬೆಂಬಲ: ಕಾರ್ಮಿಕ ಸಂಘಟನೆಗಳು ನೀಡಿರುವ ಪ್ರತಿಭಟನೆಯಲ್ಲಿ ಕೆಎಸ್‌ಆರ್‌ಟಿಸಿ  ಚಾಲಕರು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರಲ್ಲದೆ, ಮುಷ್ಕರದ ದಿನಗಳಂದು ಸಂಚಾರ ವ್ಯವಸ್ಥ್ಥಯಲ್ಲಿ ತೊಡಕುಂಟಾಗುವ ಸಾಧ್ಯತೆಗಳಿದೆಯೆಂದು ತಿಳಿಸಿದರು.
ಪಿಎಫ್ ಕಚೇರಿ ಎದುರು ಧರಣಿ: ನಿವೃತ್ತ ಕಾರ್ಮಿಕರ ಭವಿಷ್ಯಕ್ಕೆ ಆಧಾರವಾಗಿರುವ ಭವಿಷ್ಯ ನಿಧಿ ನೀಡುವಲ್ಲಿ ಸಂಬಂಧಪಟ್ಟ ಕಚೇರಿಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವುದರೊಂದಿಗೆ, ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಇಲಾಖಾ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮೈಸೂರು ಇಲ್ಲವೇ ಮಡಿಕೇರಿಯ ಪಿಎಫ್ ಕಚೇರಿ ಮುಂಭಾಗ ಧರಣಿ ನಡೆಸಬೇಕಾದೀತೆಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಸಂಘಟನೆ ಉಪಾಧ್ಯಕ್ಷ ಎನ್. ಮಣಿ, ಸೋಮವಾರಪೇಟೆ ಕಾರ್ಯದರ್ಶಿ ಕೆ.ಎಸ್. ಮಹೇಶ್, ಪಿ.ಟಿ.ಶಂಕರ್, ಖಜಾಂಚಿ ಸುಂದರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.