ಕೊಡಗು

ತ್ರಿವೇಣಿ ಸಂಗಮದಲ್ಲಿ ಮಹಾಆರತಿ

Published On :

ಕುಶಾಲನಗರ: ಅಖಿಲ ಭಾರತ ಸನ್ಯಾಸಿಗಳ ಸಂಘ, ಶ್ರೀ ಶಂಕರ ಪರಮಾನಂದ ಟ್ರಸ್ಟ್, ಶ್ರೀ ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ, ಶ್ರೀ ಕಾಶಿಮಠ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ಕಾವೇರಿ ಮಹಾಆರತಿ ಬಳಗ ಆಶ್ರಯದಲ್ಲಿ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಮಳೆಗಾಗಿ ಪ್ರಾರ್ಥಿಸಿ ಮಹಾಆರತಿ ಕಾರ್ಯಕ್ರಮ ನಡೆಯಿತು.
ಭಗಂಡೇಶ್ವರ ದೇವಾಲಯದ ಮುಖ್ಯ ಅರ್ಚಕ ಹರೀಶ್ ಭಟ್ ಮತ್ತು ತಂಡದಿಂದ ಪೂಜಾ ವಿಧಿವಿಧಾನಗಳು ನಡೆದು ಅರ್ಚನೆಯೊಂದಿಗೆ ನದಿಗೆ ಮಹಾಆರತಿ ಬೆಳಗಲಾಯಿತು.
ಅಖಿಲ ಭಾರತ ಸನ್ಯಾಸಿ ಸಂಘದ ಅಧ್ಯಕ್ಷ ಶ್ರೀ ಶಿವಜ್ಞಾನದೇಶೀಕರ್ ಸ್ವಾಮೀಜಿ, ಗಂಜಾಂ ಮಠದ ಶ್ರೀ ಗಣೇಶಸ್ವರೂಪಾನಂದಗಿರಿ ಸ್ವಾಮೀಜಿ ಹಾಗೂ ಮೂರು ಪ್ರಾಂತ್ಯಗಳ ಸಾಧು ಸಂತರು, ದೇವಾಲಯ ಸಮಿತಿ ಸದಸ್ಯರು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಮುಖ ವಸಂತ್, ಕುಶಾಲನಗರ ಕಾವೇರಿ ಮಹಾಆರತಿ ಬಳಗದ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮತ್ತು ಸ್ಥಳೀಯ ಮಹಿಳೆಯರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.  ಕಾಕತಾಳೀಯ ಎಂಬಂತೆ ಕಾರ್ಯಕ್ರಮ ಸಂದರ್ಭ ಭಾಗಮಂಡಲ ವ್ಯಾಪ್ತಿಯಲ್ಲಿ ಮಳೆ ಸುರಿಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.