ವುಮೆನ್ಸ್ ಫ್ರೆಂಟ್ ಖಂಡನೆ
ಮಡಿಕೇರಿ: ಕರ್ನಾಟಕದ ವಿವಿಧೆಡೆಗಳಲ್ಲಿ ಹೆಚ್ಚುತ್ತಲೇ ಇರುವ ಮಹಿಳಾ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳನ್ನು ನ್ಯಾಷನಲ್ ವುಮೆನ್ಸ್ ಫ್ರೆಂಟ್ ತೀವ್ರವಾಗಿ ಖಂಡಿಸಿದ್ದು, ಈ ಎಲ್ಲಾ ಘಟನೆಗಳಿಗೆ ಪೊಲೀಸ್ ವ್ಯವಸ್ಥೆಯ ವೈಫಲ್ಯವೇ ಕಾರಣ ಎಂದು ನ್ಯಾಷನಲ್ ವುಮೆನ್ಸ್ ಫ್ರೆಂಟ್ ಪ್ರಮುಖರು ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಇತ್ತೀಚಿನ ದಿನಗಳಲ್ಲಿ ದೇಶ ಹಾಗೂ ರಾಜ್ಯದಲ್ಲಿ ವಿಕೃತ ಮನಸ್ಸಿನ ಕಾಮುಕರಿಂದ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದು, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಯಾವುದೇ ರಕ್ಷಣೆ ಇಲ್ಲ. ದೆಹಲಿಯಲ್ಲಿ ನಡೆದ ಅಮಾನವೀಯ ಪೈಶಾಚಿಕ ಅತ್ಯಾಚಾರ ಕೃತ್ಯದ ನಂತರವೂ ರಾಜ್ಯದ ಪೊಲೀಸ್ ವ್ಯವಸ್ಥೆ ಎಚ್ಚೆತ್ತುಕೊಳ್ಳದೆ ಇರುವುದು ಘಟನೆ ಮರುಕಳಿಸುವುದಕ್ಕೆ ಕಾರಣವಾಗಿದೆ ಎಂದು ನ್ಯಾಷನಲ್ ವುಮೆನ್ಸ್ ಫ್ರೆಂಟ್ಸ್ನ ಕೊಡಗು ಜಿಲ್ಲಾ ಘಟಕದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಮಹಿಳಾ ದೌರ್ಜನ್ಯದಂಥ ಪ್ರಕರಣಗಳು ಮರುಕಳಿಸದಂತೆ ಕಾನೂನಿಗೆ ತಿದ್ದುಪಡಿ ತಂದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆಯಲ್ಲಿರುವ ಬೇಜವಾಬ್ದಾರಿತನ ಹಾಗೂ ತಾರತಮ್ಯ ಧೋರಣೆಯ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕು. ಅತ್ಯಾಚಾರಿ ಆರೋಪಿಗಳು ಯಾವುದೇ ಧರ್ಮಕ್ಕೆ ಸೇರಿದವರಾಗಿದ್ದರೂ ಪ್ರಭಾವಕ್ಕೆ ಮಣಿಯದೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಂಘಟನೆಯ ಪ್ರಮುಖರು ಒತ್ತಾಯಿಸಿದರು. ಈ ರೀತಿಯ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವುದರಿಂದ ಮಾತ್ರ ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟ ಪ್ರತಿಭಟನಾಕಾರರು, ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಸಮಾಜವು ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಸಿ ಮಾನಸಿಕ ಧೈರ್ಯವನ್ನು ಕುಂದಿಸುತ್ತಿದೆ. ಈ ವ್ಯವಸ್ಥೆಯ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟ ನಡೆಸುವ ಅನಿವಾರ್ಯತೆಯಿದ್ದು, ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು.
ಅಂತರ್ಜಾಲ, ಮೊಬೈಲ್ ಮತ್ತು ಟಿವಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳನ್ನು ಮುಕ್ತಗೊಳಿಸಬೇಕು ಎಂದು ಪ್ರಮುಖರು ಒತ್ತಾಯಿಸಿದರು. ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಅವರಿಗೆ ಮನವಿ ಸಲ್ಲಿಸುವ ಸಂದರ್ಭ ಅಧ್ಯಕ್ಷೆ ನಫೀಜಾ ಅಡ್ಕರ್, ಕಾರ್ಯದರ್ಶಿ ಆಶಿಕಿ, ತಾಹಿರಾ, ಫಾತಿಮಾ, ಮಹಮ್ಮದ್ ಆಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

