ಆನೆ ದಾಳಿ: ಬೆಳೆ ನಾಶ, ಅಪಾರ ಹಾನಿ
ಶನಿವಾರಸಂತೆ: ಇಲ್ಲಿಗೆ ಸಮೀಪದ ಎಳನೀರುಗುಂಡಿ, ಕುರುಡುವಳ್ಳಿ, ಕಾರ್ಗೋಡು ಸುತ್ತಮುತ್ತ ಆನೆಗಳು ತೋಟಗಳಿಗೆ ನುಗ್ಗಿ ದಾಂದಲೆ ನಡೆಸಿದ ಪರಿಣಾಮ ಅಪಾರ ಬೆಳೆ ನಾಶವಾಗಿದೆ. ರೈತರು ಬೆಳೆದ ಕಾಫಿ, ಮರಗೆಣಸು, ಅಡಕೆ, ಬಾಳೆಗಳನ್ನು ತುಳಿದು ನಾಶಪಡಿಸಿದ್ದು, ಸಾವಿರಾರು ರು. ನಷ್ಟ ಅಂದಾಜಿಸಲಾಗಿದೆ. ಪ್ರಸ್ತುತ ಹಲಸು ಹಣ್ಣಾಗುವ ಸಮಯವಾಗಿರುವುದರಿಂದ ನೀಡ್ತ ಮೀಸಲು ಅರಣ್ಯದಿಂದ ಕಾಡಾನೆಗಳು ನಿರಂತರವಾಗಿ ರಾತ್ರಿ-ಹಗಲು ಸಂಚರಿಸುತ್ತಿವೆ. ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸಲು ತೊಂದರೆಯಾಗುತ್ತಿದ್ದು, ಇಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಬೇರೆಡೆಗೆ ಓಡಿಸುವ ಪ್ರಯತ್ನವಾಗಬೇಕು ಅಥವಾ ಆನೆಗಳನ್ನು ಹಿಡಿದು ಬೇರೆಡೆಗೆ ಬಿಡಬೇಕು, ರೈತರ ಬೆಳೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಎಳನೀರುಗುಂಡಿ ಸುತ್ತಮುತ್ತಲ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

