ವಿದ್ಯುತ್ ಕಡಿತ ವಿರೋಧಿಸಿ ಪ್ರತಿಭಟನೆ
ಚಿಂತಾಮಣಿ: ರೈತರಿಗೆ ಸಮರ್ಪಕ ವಿದ್ಯುತ್ ನೀಡುವಲ್ಲಿ ಬೆಸ್ಕಾಂ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆಯ ನೂರಾರು ಕಾರ್ಯಕರ್ತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸ ಮಂದಿರದಿಂದ ಹೊರಟ ನೂರಾರು ರೈತರು ತಾಲೂಕಿನ ಬೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯುತ್ ಅಭಾವದಿಂದ ರಾತ್ರಿ ಪೂರ ನಿದ್ದೆಗೆಟ್ಟು ಕರೆಂಟ್ ಎದುರು ನೋಡುವ ದುಸ್ಥಿತಿ ಒದಗಿದ ಹಿನ್ನೆಲೆಯಲ್ಲಿ ಸೋಮವಾರರಂದು ಬೆಸ್ಕಾಂ ಅಧಿಕಾರಿಗಳ ವಿರುದ್ಧ ದಿಕ್ಕಾರಗಳನ್ನು ಕೂಗುತ್ತಾ ವಿದ್ಯುತ್ಗಾಗಿ ಒತ್ತಾಯಿಸಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಎಂದು ಹೇಳಿದ ನೂರಾರು 20 ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ತಾಲೂಕು ದಂಡಾಧಿಕಾರಿ ಎಂ.ಎನ್.ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.
ರೈತರು ಸಂಘ ಹಾಗೂ ಹಸಿರು ಸೇನೆಯ ಮುಂಖಂಡರಾದ ಎಂ.ಪಿ.ಬೈಯಪ್ಪರೆಡ್ಡಿ, ಕಾರ್ಯಾಧ್ಯಕ್ಷ ನಾರಾಯಣಸ್ವಾಮಿ,ಕೋನಪ್ಪ, ಗೌರವಾಧ್ಯಕ್ಷ ಪಿ.ಎಸ್.ನಾಗೇಶ್, ಬಿ.ಎಸ್.ವೆಂಕಟರವಣಪ್ಪ,ಅನಂತರೆಡ್ಡಿ,ಶ್ರೀರಾಮಪ್ಪ, ನರಸಿಂಹಪ್ಪ, ವೆಂಕಟರೆಡ್ಡಿ, ವೆಂಕಟಸುಬ್ಬಾರೆಡ್ಡಿ ಸೇರಿದಂತೆ ನೂರಾರು ರೈತರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

