ಕೋಲಾರ

'ದೇಶದ ಪ್ರಗತಿಗೆ ಶಿಕ್ಷಣ ಮುಖ್ಯ'

Published On :

ಮುಳಬಾಗಲು:  ದೇಶದ ಪ್ರಗತಿಗೆ ಶಿಕ್ಷಣ ಅತಿ ಮುಖ್ಯ ಎಂದು ಮುಳಬಾಗಲು ಡಿವೈಎಸ್ಪಿ ಸಿದ್ದರಾಮಯ್ಯ ಹೇಳಿದರು.
ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಭಾನುವಾರ ಶ್ರೀವಾಸವಿ ವಿದ್ಯಾನಿಕೇತನ್ ವತಿಯಿಂದ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ಪಡೆದರೇ ಮಾತ್ರ ಭವಿಷ್ಯದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಶಿಸ್ತು -ಸಂಯಮ ರೂಢಿಸಿಕೊಳ್ಳಬೇಕು ಎಂದರು.
ಗ್ರಾಮಾಂತರ ಪ್ರದೇಶದ ಮಕ್ಕಳು ಹೆಚ್ಚಿನ ಪ್ರತಿಭಾವಂತರಾಗಿದ್ದು, ಶಿಕ್ಷಕರು ಅವರ ಪ್ರತಿಭೆಯನ್ನು ಹೊರತರಲು ಶ್ರಮಿಸಬೇಕು ಎಂದರು.
ಜಿಪಂ ಸದಸ್ಯೆ ತೇಜಸ್ವಿನಿ ಉವರು 6ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿನಿ ರೋನ ಚವಾಕ್ ಅವರಿಗೆ ನಗದು ಬಹುಮಾನ ವಿತರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ವಾಸವಿ ವಿದ್ಯಾನಿಕೇತನ ಅಧ್ಯಕ್ಷ ಕೆ.ಎಂ. ನಾರಾಯಣಮೂರ್ತಿ, ಕಾರ್ಯದರ್ಶಿ ಟಿ.ಆರ್. ನಾಗರಾಜ್, ಉಪಾಧ್ಯಕ್ಷ ಡಾ.ನರೇಂದ್ರ, ಕೆ.ಪಿ. ಆನಂದ್, ನಿರ್ದೇಶಕರಾದ ವರದರಾಜ್, ಬಿ.ಎ.ನಾರಾಯಣಮೂರ್ತಿ, ಕೆ.ಎಸ್.ನಾಗೇಶ್‌ಬಾಬು, ಜೆ.ಡಿ. ರವಿಕುಮಾರ್, ಅರುಣಾ ನಾಗೇಶ್, ನಿರ್ಮಲ, ಸಮಾಜ ಸೇವಕ ಕೆ.ವಿ.ರೆಡ್ಡಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.