ಕೋಲಾರ

2ನೇ ದಿನದ ಮುಷ್ಕರ ನೀರಸ

Published On :

ಕೋಲಾರ:  ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದ ಎರಡನೇ ದಿನವಾದ ಗುರುವಾರ ಕೋಲಾರ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ರಾಷ್ಟ್ರೀಕೃತ ಬ್ಯಾಂಕುಗಳು ಮಾತ್ರ ಎರಡನೇ ದಿನವೂ ಬಂದ್ ಆಗಿದ್ದವು, ಅಂಚೆ ಕಚೇರಿ, ಬಿ.ಎಸ್.ಎನ್.ಎಲ್. ಹಾಗೂ ರಾಜ್ಯ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿತು.  ರಾಜ್ಯ ಸರ್ಕಾರಿ ಬಸ್ಸುಗಳು ಸಂಚಾರ ಆರಂಭಿಸಿತಾದರೂ ಪ್ರಯಾಣಿಕರು ಎರಡು ದಿನ ಮುಷ್ಕರ ಇರುವುದಾಗಿ ಭಾವಿಸಿದ್ದರಿಂದ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಆಟೋ ರಿಕ್ಷಾಗಳು ಎಂದಿನಂತೆ ಸಂಚರಿಸಿದವು. ಬುಧವಾರಕ್ಕೆ ಹೊಲಿಕೆ ಮಾಡಿದಲ್ಲಿ ಜನರದಲ್ಲಿ ಜನಜೀವನ ಗುರುವಾರ ಸಹಜ ಸ್ಥಿತಿಗೆ ಮರಳಿತ್ತು. ಯಾವುದೇ ಅಹಿತಕರ ಘಟನೆಗಳು ಇಲ್ಲದೆ ಎರಡನೇ ದಿನದ ಮುಷ್ಕರ ಮಂದಗತಿಯಲ್ಲಿ ನಡೆಯಿತು. ನಗರದಲ್ಲಿ ಬಹುತೇಕ ಶಾಲಾ- ಕಾಲೇಜುಗಳು ಎಂದಿನಂತೆ ನಡೆಯಿತು. ಜಿಲ್ಲಾ ಸರ್ಕಾರಿ ನೌಕರರ ಒಕ್ಕೂಟ, ಸಿಪಿಎಂ, ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಅಂಗನವಾಡಿ ನೌಕರರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರಾದ ಅಮರನಾರಾಯಣ, ಶಫಿವುಲ್ಲಾ ಖಾನ್,ವೆಂಕಟೇಶ್ ಅವರುಗಳು ಇದ್ದರು.

ಚಿಂತಾಮಣಿಯಲ್ಲಿ ಉತ್ತಮ ಪ್ರತಿಕ್ರಿಯೆ
ಚಿಂತಾಮಣಿ:  ಕಾರ್ಮಿಕ ಸಂಘಟನೆಗಳ ಮುಷ್ಕರ ಬೆಂಬಲಿಸಿ ಬುಧವಾರದಿಂದ ಕರೆ ನೀಡಿದ್ದ ಎರಡು ದಿನಗಳ ಬಂದ್‌ಗೆ ಚಿಂತಾಮಣಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುಷ್ಕರದಿಂದಾಗಿ ಪಟ್ಟಣದ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿತ್ತು. ಹಾಲು ಮತ್ತು ಔಷಧಿ ಮಾರಾಟಕ್ಕೆ ಬಂದ್ ಬಾಧೆ ತಟ್ಟಲಿಲ್ಲ. ಸಿಪಿಐ(ಎಂ) ನೂರಾರು ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು.  ಗಜಾನನ ವೃತ್ತ, ಆಜಾದ್ ಚೌಕ, ಚೇಳೂರು ಸರ್ಕಲ್, ಯೋಗಿನಾರಾಯಣ ಸರ್ಕಲ್, ಎಂ.ಜಿ. ರಸ್ತೆ ಹಾಗೂ ತಾಲೂಕು ಕಚೇರಿ ಮೂಲಕ ಜೋಡಿ ರಸ್ತೆಯಲ್ಲಿ ಅಂಗಡಿ- ಮುಂಗ್ಗಟ್ಟು ತೆರೆಯದಂತೆ ಹಾಗೂ ಬಂದ್‌ಗೆ ಸಹಕರಿಸುವಂತೆ ಕಾರ್ಯಕರ್ತರು ಮನವಿ ಮಾಡಿದರು. ಸಿಪಿಐ(ಎಂ) ಹಿರಿಯ ಮುಖಂಡ ಗೋಪಿನಾಥ್ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.