ಕೋಲಾರ

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತ್ಯ

Published On :

ಕೋಲಾರ:  ಮಾ.7ರಂದು ನಡೆಯುವ ಕೋಲಾರ ನಗರಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದ್ದ ಶನಿವಾರ ವಿವಿಧ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ನಗರಸಭೆ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದ್ದರಿಂದ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದು ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭ ನೂಕುನುಗ್ಗಲು ಉಂಟಾಗಿದ್ದರಿಂದ ಪೊಲೀಸರು ಜನರನ್ನು ನಿಯಂತ್ರಿಸಲು ಪರದಾಡಿದರು. ಜೆಡಿಎಸ್ 34 ವಾರ್ಡುಗಳಿಗೆ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇಂದು ಅನೇಕರು ನಾಮಪತ್ರ ಸಲ್ಲಿಸಿದರು. 2ನೇ ವಾರ್ಡನ್ನು ಜೆಡಿಎಸ್ ಸಿಪಿಐಎಂಗೆ ಬಿಟ್ಟುಕೊಟ್ಟಿದೆ. ಇದೇ ರೀತಿ ಕಾಂಗ್ರೆಸ್ ಪಕ್ಷದವರು ವಾರ್ಡ್-5 ಮತ್ತು 27ರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದೆ ಉಳಿದ 33 ವಾರ್ಡುಗಳಿಗೆ ನಾಮಪತ್ರ ಸಲ್ಲಿಸಿದೆ. ಬಿಜೆಪಿಯಿಂದ 22 ವಾರ್ಡುಗಳಿಗೆ ಅಧಿಕೃತ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, 21ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸಲಾಗುತ್ತಿದೆ. ಕೆಜೆಪಿಯು ಸಹ ಕೆಲವು ವಾರ್ಡುಗಳಿಗೆ ತನ್ನ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸಿದೆ. ಕರ್ನಾಟಕ ರಾಜ್ಯ ರೈತ ಸಂಘದಿಂದ ಒಬ್ಬರನ್ನು ಸ್ಪರ್ಧೆಗೆ ಇಳಿಸಲಾಗಿದೆ. ಜೆಡಿಎಸ್ ಮತ್ತು ವರ್ತೂರ್ ಬಣದಲ್ಲಿ ಬಂಡಾಯ ಹೆಚ್ಚಾಗಿದೆ. ಫೆ.26ರ ಸಂಜೆಯೊಳಗೆ ಎರಡೂ ಕಡೆಯವರು ಬಂಡಾಯ ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಸಲು ಈಗಾಗಲೇ ಕಸರತ್ತು ನಡೆಸಿದ್ದಾರೆ. ಫೆ.25ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು. ಫೆ.27ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಕಡೆ ದಿನವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.