ಕೋಲಾರ

ಥಳಕು ಬಳಕಿನ ಬೇಕಾಬಿಟ್ಟಿ ಬಜೆಟ್

Published On :

ಕೋಲಾರ: ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಿ, ಹಣದುಬ್ಬರ ಕಡಿಮೆ ಮಾಡಿ ಎಲ್ಲ ವರ್ಗದ ಹಿತ ಕಾಪಾಡಬೇಕಾಗಿದ್ದ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಥಳಕು ಬಳಕಿನ ಬೇಕಾಬಿಟ್ಟಿ ಬಜೆಟ್ ಮಂಡಿಸಿದ್ದಾರೆಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ಅವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರುವಾರ ಕೋಲಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರದ ಈ ಸಾಲಿನ ಬಜೆಟ್ ಜನ ವಿರೋಧಿಯಾಗಿದೆ. ಇದೊಂದು ಅಭಿವೃದ್ಧಿಗೆ ಪೂರಕವಲ್ಲದ ನಿರಾಶಾದಾಯಕ ಬಜೆಟ್ ಆಗಿದೆ ಎಂದರು.
ದೇಶದ ಆರ್ಥಿಕ ತಜ್ಞರು ಸಹ ಕೇಂದ್ರ ಬಜೆಟ್ ಒಪ್ಪುವ ಸ್ಥಿತಿಯಲ್ಲಿ ಇಲ್ಲ. ಜನತೆಯ ನಿರೀಕ್ಷೆಗಳನ್ನು ಹುಸಿಗೊಳಿಸಲಾಗಿದೆ ಎಂದು ದೂರಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ಬಜೆಟ್‌ಗೂ ಯಾವುದೇ ಕಿಮ್ಮತ್ತಿಲ್ಲ. ಫೆ.8ಕ್ಕೆ ಬಜೆಟ್ ಮಂಡಿಸಲಾಗಿದೆ. ಏ.1ರಿಂದ ಬಜೆಟ್‌ನಲ್ಲಿ ಘೋಷಣೆ ಆಗಿರುವ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಬೇಕು. ವಿಧಾನಸಭೆಗೆ ಮಾರ್ಚ್‌ನಲ್ಲೇ ಚುನಾವಣೆ ಘೋಷಣೆ ಆದರೆ ಯಾವುದೇ ಯೋಜನೆ ಜಾರಿಗೆ ಬರಲು ಸಾಧ್ಯವೇ ಇಲ್ಲವೆಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.