ಚಿಂತಾಮಣಿಯಲ್ಲಿ ಜೆಡಿಎಸ್ ಜಯಭೇರಿ ಶತಸಿದ್ಧ: ಕೃಷ್ಣಾರೆಡ್ಡಿ
ಕ.ಪ್ರ. ವಾರ್ತೆ ್ಣ ಚಿಂತಾಮಣಿ ್ಣ ಮಾ.29
ಕ್ಷೇತ್ರದಲ್ಲಿ ಜೆಡಿಎಸ್ ಜಯಭೇರಿ ಗಳಿಸುವುದು ಶತಸಿದ್ಧವೆಂದು ಜೆಡಿಎಸ್ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಜೆ.ಕೆ. ಕೃಷ್ಣಾರೆಡ್ಡಿ ತಿಳಿಸಿದರು.
ಅವರು ತಾಲೂಕಿನ ಬಟ್ಲಹಳ್ಳಿ ಮತ್ತು ಕಡದಲಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಜೆಡಿಎಸ ಪರ ಪ್ರಚಾರವನ್ನು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ನಂತರ ಕಾರ್ಯಕರ್ತರನ್ನು ಹಾಗೂ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಜೆ.ಕೆ. ಕೃಷ್ಣಾರೆಡ್ಡಿ ಕಳೆದ 5 ವರ್ಷಗಳಿಂದ ಚಿಂತಾಮಣಿ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜ ಸೇವೆ ಜೊತೆಗೆ ಅಭಿವೃದ್ಧಿ ಕೆಲಸಗಳನ್ನು ಜನ ಸ್ವೀಕರಿಸಿ ನನ್ನನ್ನು ಆಶೀರ್ವಾದ ಮಾಡಿದ ಫಲವಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಜಯಭೇರಿ ಗಳಿಸುವುದು ಖಚಿತವೆಂದು ನುಡಿದರು.
ಸ್ವಾತಂತ್ರ್ಯ ಬಂದು 60 ವರ್ಷ ಕಳೆದರೂ ಅಭಿವೃದ್ಧಿ ಎಂದು ಹೇಳುವ ಸ್ಥಳೀಯ ಜನಪ್ರತಿನಿಧಿಗಳು ನೀರು, ರಸ್ತೆ, ವಿದ್ಯುತ್, ವಸತಿ ಸೌಲಭ್ಯಗಳನ್ನು ಜನರಿಗೆ ಕಲ್ಪಿಸುವಲ್ಲಿ ವಿಫಲಗೊಂಡಿರುವುದಾಗಿ ಶಾಸಕರ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕೇವಲ 20 ತಿಂಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ, ಉಚಿತ ಬೈಸಿಕಲ್, ವೃದ್ಧಾಪ್ಯ ವೇತನಾ ಸೇರಿದಂತೆ ಜನಪರ ಕಾರ್ಯಕ್ರಮಗಳನ್ನು ಜನರು ಇಂದಿಗೂ ಜೆಡಿಎಸ್ ಆಡಳಿತವನ್ನು ಬಯಸುತ್ತಿದ್ದಾರೆಂದು ಅವರು ತಿಳಿಸಿದರು. ಕಾರ್ಯಕ್ರಮಕ್ಕೂ ಮುನ್ನ ಸ್ವಾಂಪಲ್ಲಿ, ಬಟ್ಲಹಳ್ಳಿ, ಅಂಕಾಲಮಡುಗು, ಕಡದಲಮರಿ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಜೆಡಿಎಸ್ ಬೆಂಬಲಿಸುವಂತೆ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ತಳಗವಾರ ರಾಜಗೋಪಾಲ್, ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಆರ್. ಶ್ರೀನಾಥ್,ನಗರಸಭಾ ಮಾಜಿ ಸದಸ್ಯ ಮಹಮದ್‌ಗೌಸ್, ಮುಖಂಡರಾದ ಯನಮಲಪಾಡಿ ಚಂದ್ರಾರೆಡ್ಡಿ, ಅಬ್ಬುಗುಂಡು ಸುಬ್ಬಾರೆಡ್ಡಿ, ದಿನ್ನಮಿಂದಪಲ್ಲಿ ಬೈರಾರೆಡ್ಡಿ, ಕೃಷ್ಣಮೂರ್ತಿ,ಶ್ರೀರಾಮರೆಡ್ಡಿ, ಮದ್ದಿರೆಡ್ಡಿ, ಶಿವಾರೆಡ್ಡಿ, ಕಿಟ್ಟಣ್ಣ ಸೇರಿದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

