ಭ್ರಷ್ಟ ಬಿಜೆಪಿಗೆ ರಾಜ್ಯದಿಂದ ಗೆಟ್‌ಪಾಸ್ ನೀಡಿ
ಕ.ಪ್ರ.ವಾರ್ತೆ ್ಣ ಬಂಗಾರಪೇಟೆ ್ಣ ಮಾ.29
ಭ್ರಷ್ಟ ಬಿಜೆಪಿ ಸರ್ಕಾರದ ಹಗರಣಗಳನ್ನು ಎಲೆಎಲೆಯಾಗಿ ಜನ ಸಾಮಾನ್ಯರಿಗೆ ತಿಳಿಸುವ ಮೂಲಕ ಬಿಜೆಪಿಯನ್ನು ರಾಜ್ಯದಿಂದಲೇ ಬುಡ ಸಮೇತ ಕಿತ್ತು ಹಾಕಲು ಕ್ಷೇತ್ರದ ಜನರು ಮುಂದಾಗಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್. ನಾರಾಯಣಸ್ವಾಮಿ ಕರೆ ನೀಡಿದರು.
ಚುನಾವಣೆ ಪ್ರಯುಕ್ತ ಅಭ್ಯರ್ಥಿ ಎಸ್.ಎನ್. ನಾರಾಯಣಸ್ವಾಮಿ ತಾಲೂಕಿನ ಆಲಂಬಾಡಿ ಜೋತೇನಹಳ್ಳಿ ಪಂಚಾಯ್ತಿಯಲ್ಲಿ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಿಂದೆದೂ ಕಾಣದಷ್ಟು ಭೀಕರ ಬರ ಆವರಿಸಿದೆ. ಇಂತಹ ವೇಳೆ ಯಾವುದೇ ಬರ ಪರಿಹಾರ ಯೋಜನೆಗಳನ್ನು ರೂಪಿಸುವಲ್ಲಿ ಸರ್ಕಾರ ವಿಫಲವಾಗಿದೆ, ಕನಿಷ್ಠ ಪಕ್ಷ ಕುಡಿಯುವ ನೀರು ಒದಗಿಸುವಲ್ಲಿ ಎಡವಿದೆ. ಈ ಚುನಾವಣೆಯಲ್ಲಿ ಕೈಗೆ ಅಧಿಕಾರ ಕೊಟ್ಟರೆ ಜಿಲ್ಲೆಗೆ ಶಾಶ್ವತ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಿಕೊಡುವುದೇ ನನ್ನ ಮೊದಲ ಗುರಿಯಾಗಿದೆ ಎಂದು ಹೇಳಿದರು.
ಹಲವು ದಶಕಗಳಿಂದ ತಪಸ್ಸು ಮಾಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಅಧಿಕಾರವನ್ನು ಸದ್ಬಳಕೆ ಮಾಡಿಕೊಳ್ಳದೆ ದುರ್ಬಳಕೆ ಮಾಡಿಕೊಂಡು ಮುಖ್ಯಮಂತ್ರಿಯಿಂದ ಹಿಡಿದು ಸಾಲು ಸಾಲಾಗಿ ಸಚಿವರು ಜೈಲು ಸೇರಿ ರಾಜ್ಯದ ಮಾನವನ್ನು ಮೂರು ಕಾಸಿಗೆ ಹರಾಜು ಹಾಕಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ನಮ್ಮ ರಾಜ್ಯಕ್ಕೆ ಬೇಕೆ ಎಂಬ ಬಗ್ಗೆ ಯುವಕರು ಚಿಂತನೆ ಮಾಡಬೇಕು ಎಂದರಲ್ಲದೆ ಬಿಜೆಪಿಗೆ ರಾಜ್ಯದಿಂದ ಗೇಟ್‌ಪಾಸ್ ನೀಡಬೇಕು, ಉತ್ತಮ ಆಡಳಿತ ನೀಡುವ ಸಾಮರ್ಥ್ಯವಿರುವುದು ಕಾಂಗ್ರೆಸ್‌ಗೆ ಮಾತ್ರ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದು ಭವಿಷ್ಯ ನುಡಿದರು.
ಸರ್ಕಾರ ಮಾಡಬೇಕಿದ್ದ ಹಲವು ಗಂಭೀರ ಸಮಸ್ಯೆಗಳನ್ನು ನಾನು ನನ್ನ ಟ್ರಸ್ಟ್ ವತಿಯಿಂದ ಮಾಡಿರುವೆ ನನ್ನ ಸಮಾಜ ಸೇವೆ ನಿರಂತರವಾಗಿ ಮುಂದುವರೆಯಲು ಕಾರ್ಯಕರ್ತರು ಹಳ್ಳಿಗಳಲ್ಲಿ ಹಗಲಿರುಳು ವ್ಯಾಪಕ ಪ್ರಚಾರ ಮಾಡಬೇಕೆಂದು ಕೋರಿದರು. ಪ್ರಚಾರ ಸಮಿತಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಬ್ಲಾಕ್ ಅಧ್ಯಕ್ಷರಾದ ಪಾರ್ಥಸಾರಥಿ, ಮಂಜುನಾಥ್,ಬಿ. ಹೊಸರಾಯಪ್ಪ, ಎಸ್.ಎಂ. ಗೋಪಾಲ್, ವೆಂಕಟರಾಮಯ್ಯ, ಕೇತಗಾನಹಳ್ಳಿ ಗೋವಿಂದರಾಜು, ಮುನಿಸ್ವಾಮಿ, ಬಾಲಪ್ಪ, ರತ್ನಪ್ಪ, ವೆಂಕಟೇಶ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

