ಶ್ರೀನಿವಾಸಪುರ ಕ್ಷೇತ್ರದಲ್ಲಿ ರೆಡ್ಡಿ-ಸ್ವಾಮಿ ಪ್ರಚಾರ ಜೋರು
ಕ.ಪ್ರ. ವಾರ್ತೆ ್ಣ ಕೋಲಾರ ್ಣ ಮಾ.29
ಶ್ರೀನಿವಾಸಪುರ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್‌ನ ಕೆ.ಆರ್. ರಮೇಶ್ ಕುಮಾರ್ (ಸ್ವಾಮಿ) ಮತ್ತು ಜೆಡಿಎಸ್ ಹಾಲಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ನಡುವೆ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ.
ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಪೈಪೋಟಿ ಇಲ್ಲದಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳಿಬ್ಬರೂ ಅಬ್ಬರದಿಂದ ಪ್ರಚಾರ ಕೈಗೊಂಡಿದ್ದಾರೆ. 1970ರಿಂದಲೂ ಇವರಿಬ್ಬರ ನಡುವೆಯೇ ಹಣಾಹಣಿ ನಡೆಯುತ್ತಿದೆ. ರಮೇಶ್ ಕುಮಾರ್ ಅವರಿಗೆ ಈ ಚುನಾವಣೆ ಅಳಿವು - ಉಳಿವಿನ ಪ್ರಶ್ನೆಯಾಗಿದೆ.
2008ರ ಚುನಾವಣೆಯಲ್ಲಿ ಸೋತ ಬಳಿಕ ಶ್ರೀನಿವಾಸಪುರದಿಂದ ಮತ್ತೊಮ್ಮೆ ಸ್ಪರ್ಧಿಸಬಾರದೆಂದು ಚಿಂತಿಸಿದ್ದರಾದರೂ ಕಾಂಗ್ರೆಸ್ ಕಾರ್ಯಕರ್ತರು ತಾವಿಲ್ಲದೆ ಕ್ಷೇತ್ರ ಬಡವಾಗುತ್ತದೆ, ನಾವೆಲ್ಲ ತಬ್ಬಲಿಗಳಾಗುತ್ತೇವೆಂದು ಕಣ್ಣೀರು ಸುರಿಸಿದ್ದರ ಪರಿಣಾಮ ಮತ್ತೆ ಅಭ್ಯರ್ಥಿಯಾಗಲು ಒಪ್ಪಿದ್ದಾರೆ. ಈ ಬಾರಿ ಹೇಗಾದರೂ ಮಾಡಿ ಗೆಲ್ಲಬೇಕೆಂದು ಕ್ಷೇತ್ರದಲ್ಲಿ ಹಗಲಿರುಳ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರ ಪುನರ್ ವಿಂಗಡಣೆಯಿಂದಾಗಿ ಕೋಲಾರ ತಾಲೂಕಿಗೆ ಸೇರಿದ ಹೊಳೂರು ಮತ್ತು ಸುಗಟೂರು ಹೋಬಳಿಗಳು ಈಗ ಶ್ರೀನಿವಾಸಪುರಕ್ಕೆ ಸೇರಿರುವುದರಿಂದ ಇಲ್ಲಿನ ಮತದಾರರ ಮನಸ್ಥಿತಿಗೆ ಅನುಗುಣವಾಗಿ ರಮೇಶ್‌ಕುಮಾರ್ ಪ್ರಚಾರ ಶೈಲಿ ಬದಲಿಸಿಕೊಂಡಿದ್ದಾರೆ.
ಕಳೆದ ಚುನಾವಣೆಯಲ್ಲಿ ಈ ಎರಡು ಹೋಬಳಿಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಮತ ಸಿಕ್ಕಿರಲಿಲ್ಲ. ಈ ಬಾರಿ ಈ ಭಾಗದ ಕಾಂಗ್ರೆಸ್ ಪ್ರಭಾವಿ ಮುಖಂಡರನ್ನು ಜತೆಗಿಟ್ಟುಕೊಂಡು ಕಾರ್ಯತಂತ್ರ ರೂಪಿಸಿದ್ದಾರೆ.
ಇತ್ತೀಚೆಗೆ ನಡೆದ ಶ್ರೀನಿವಾಸಪುರ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸಂಖ್ಯೆಯಲ್ಲಿ ಗೆದ್ದಿರುವುದರಿಂದ ರಮೇಶ್‌ಕುಮಾರ್ ತಮ್ಮ ಚುನಾವಣೆಯಲ್ಲೂ ಬಹುಮತ ಸಿಗುತ್ತದೆ ಎಂದು ಭರವಸೆ ಹೊಂದಿದ್ದಾರೆ.
ಜೆಡಿಎಸ್‌ನಿಂದ ಮತ್ತೊಮ್ಮೆ ಸ್ಪರ್ಧಿಸುತ್ತಿರುವ ಹಾಲಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ತಮ್ಮ ಸ್ಥಾನ ಉಳಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಕಳೆದ ಬಾರಿ ತಮ್ಮ ಕೈಹಿಡಿದ ಹೋಳೂರು ಮತ್ತು ಸುಗಟೂರು ಹೋಬಳಿಯ ಮತದಾರರು ಈ ಬಾರಿ ಕೈ ಕೊಡದಿರಲಿ ಎಂದು ಈ ಎರಡೂ ಹೋಬಳಿಗಳಲ್ಲಿ ಹೆಚ್ಚಿನ ಪ್ರಚಾರ ನಡೆಸುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಸಾರಿ ಶ್ರೀನಿವಾಸಪುರ ಕ್ಷೇತ್ರಕ್ಕೆ ಭೇಟಿ ನೀಡಿ ವೆಂಕಟಶಿವಾರೆಡ್ಡಿ ಪರವಾಗಿ ಮತಯಾಚಿಸಿದ್ದಾರೆ. ತಮ್ಮ ಜತೆಗಿದ್ದ ಕೆಲವು ಮುಖಂಡರು ಕಾಂಗ್ರೆಸ್‌ಗೆ ಪಕ್ಷಾಂತರವಾಗಿರುವುದರಿಂದ ವೆಂಕಟಶಿವಾರೆಡ್ಡಿ ಚುನಾವಣೆಯಲ್ಲಿ ಇದರಿಂದ ಯಾವುದೇ ಹಾನಿ ಆಗಬಾರದೆಂದು ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸುತ್ತಿದ್ದಾರೆ.
ಇಬ್ಬರು ಅಭ್ಯರ್ಥಿಗಳು ಪ್ರಚಾರ ಸಮಯದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುವ ಮೂಲಕ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಾಗಿ ಹುಟುಕಾಟ ನಡೆಸಿದೆ. ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಬಿಜೆಪಿಯಿಂದ ಉತ್ತಮರನ್ನು ಕಣಕ್ಕೆ ಇಳಿಸಲು ಪ್ರಯತ್ನಿಸುತ್ತಿದ್ದಾರೆ. ಕೆಜೆಪಿಯು ಜಿಲ್ಲಾಧ್ಯಕ್ಷ ಶಿವಾರೆಡ್ಡಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

