ಕೋಲಾರ

ಕೇಂದ್ರಕ್ಕೆ ವಾಸ್ತವ ಸಂಗತಿ ತಿಳಿಸಿ: ಗೋಪಾಲ್‌ಗೌಡ ಮನವಿ

Published On :

ಮಾಲೂರು: ಬೆಂಗಳೂರಿನ ಕೊಳಚೆ ನೀರನ್ನು ಪಿನಾಕಿನಿ ನದಿಯ ನೀರೆಂದು ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತ ತಪ್ಪು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ತಕ್ಷಣವೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವಾಸ್ತವ ಸಂಗತಿಯನ್ನು ತಿಳಿಸುವ ಕೆಲಸ ಮಾಡಬೇಕು ಎಂದು ಮುಗಳೂರು ಕಾಲುವೆ ನೀರು ಹೋರಾಟ ಸಮಿತಿ ಸಂಚಾಲಕ ತ್ಯಾವನಹಳ್ಳಿ ಡಾ.ಗೋಪಾಲ್ ಗೌಡ ಮನವಿ ಮಾಡಿದ್ದಾರೆ.   ಅವರು ಪಟ್ಟಣದ ಕೃಷಿಕ ಸಮಾಜದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬೆಂಗಳೂರಿನ ಕೊಳಚೆ ನೀರನ್ನು ಶುದ್ಧೀಕರಿಸಿ ಅ ನೀರನ್ನು ಮಾಲೂರಿನ 24 ಹಾಗೂ ಬಂಗಾರಪೇಟೆಯ 4 ಕೆರೆಗಳಿಗೆ ಹರಿಸುವ 70 ಕೋಟಿ ರು. ಯೋಜನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಬರ ಪ್ರದೇಶವಾಗುತ್ತಿರುವ ಮಾಲೂರು ತಾಲೂಕಿನಲ್ಲಿ ಒಯಸಿಸ್ ಸಿಕ್ಕಿದಂತೆ ಆಗಿತ್ತು.
ಆದರೆ ಸದಾ ಕರ್ನಾಟಕದ ಕೇಡುಕನ್ನೇ ಬಯಸುವ ಜಯಲಲಿತ ಕೇಂದ್ರ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿತಪ್ಪು ದಾರಿಗೆ ಎಳೆಯುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಕೇಂದ್ರಕ್ಕೆ ವಾಸ್ತವ ತಿಳಿಸುವ ಅಗತ್ಯ ಇದೆ ಎಂದರು. ಪಿನಾಕಿನಿ ನದಿಗೆ ಬಿಡದಂತೆ ಬೇರೆ ಕಾಲುವೆ ನಿರ್ಮಿಸಿ ನೀರನ್ನು ಹರಿಸಬೇಕು ಎಂದೂ ಮನವಿ ಮಾಡಿದ್ದಾರೆ. ಕರವೇ ತಾಲೂಕು ಅಧ್ಯಕ್ಷ ರಾಮಕೃಷ್ಣಪ್ಪ, ಶ್ರೀನಿವಾಸ್ ಇತರರು ಈ ಸಂದರ್ಭದಲ್ಲಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.