ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು
ಕೋಲಾರ: ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಆಯ್ಕೆಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಒಮ್ಮತ ಮೂಡದಿರುವುದರಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಸೋತ ಮುನಿ ಆಂಜನಪ್ಪನವರನ್ನೇ ಮತ್ತೆ ಕಣಕ್ಕೆ ಇಳಿಸಿ ಎಂದು ಪಕ್ಷದ ಕೆಲ ಮುಖಂಡರು ಲಾಬಿ ನಡೆಸುತ್ತಿದ್ದರೆ, ಕ್ಷೇತ್ರದವರಲ್ಲದ ಆದಿನಾರಾಯಣ ಅವರಿಗೆ ಟಿಕೆಟ್ ಕೊಡಿಸಲು ಕೆಲವರು ಒತ್ತಡ ತಂದಿರುವುದರಿಂದ ಕುಮಾರಸ್ವಾಮಿ ಅವರು ಬೇಸರಗೊಂಡಿದ್ದಾರೆನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಮುನಿ ಆಂಜನಪ್ಪ ಮತ್ತು ಆದಿನಾರಾಯಣ ಪರ ಬೆಂಬಲಿಗರು ಟಿಕೆಟ್ ವಿಚಾರವಾಗಿ ಕುಮಾರಸ್ವಾಮಿ ಎದುರೇ ಪರಸ್ವರ ಮಾತಿನ ಚಕಮಕಿ ನಡೆಸಿದ್ದರಿಂದ ಕುಮಾರಸ್ವಾಮಿ ಬೇಸರಗೊಂಡು ಕ್ಷೇತ್ರದ ಮುಖಂಡರು ಒಮ್ಮತದ ಅಭ್ಯರ್ಥಿಯನ್ನು ಸೂಚಿಸಿದಲ್ಲಿ ಬಿ ಫಾರಂ ನೀಡುತ್ತೇನೆ ಎಂದು ತಿಳಿಸಿದ್ದಾರೆ.
'ಕಾಂಗ್ರೆಸ್ ಅಶಿಸ್ತು ಸಹಿಸುವುದಿಲ್ಲ'
ಶಿಡ್ಲಘಟ್ಟ: ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುವುದಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಶಾಸಕ ವಿ.ಮುನಿಯಪ್ಪ ಸ್ಪಷ್ಟಪಡಿಸಿದರು. ತಾಲೂಕಿನ ಅಪ್ಪೇಗೌಡನಹಳ್ಳಿ ಬಯಲಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಹಲವು ಮುಖಂಡರನ್ನು ಕಾಂಗ್ರೆಸ್ ಸ್ವಾಗತಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾವತ್ತೂ ಅಶಿಸ್ತು ಸಹಿಸುವುದಿಲ್ಲ ಎಂದರು. ರಾಜ್ಯದಲ್ಲಿ ಬಿಜೆಪಿ ಸರಕಾರದ ದುರಾಡಳಿತದಿಂದ ಹಾಗೂ ಜೆಡಿಎಸ್ ಅವಕಾಶವಾದಿ ರಾಜಕಾರಣದಿಂದ ಜನ ಬೇಸತ್ತು ಸ್ಥಿರ ಸರ್ಕಾರವಿದ್ದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯವೆಂದು ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂದು ಶಾಸಕ ವಿ.ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು. ತಾಪಂ ಮಾಜಿ ಅಧ್ಯಕ್ಷ ಹಂಡಿಗನಾಳ ಬಿ.ಎಂ.ಮುನಿಕೃಷ್ಣಪ್ಪ ಮತ್ತು ಬೆಂಬಲಿಗರು ಜೆಡಿಎಸ್‌ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರೆ, ಜಿ ಪಂ ಮಾಜಿ ಸದಸ್ಯ ಓಬಳಪ್ಪ ಬಿಜೆಪಿಯಿಂದ ಸೇರ್ಪಡೆಗೊಂಡರು. ತಾಪಂ ಅಧ್ಯಕ್ಷ ಯರಬಚ್ಚಪ್ಪ, ಜಿಪಂ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ,ಸಾದಲಿ ಜೈಪ್ರಕಾಶ್, ಬಿ.ಕೆ.ನಾರಾಯಣಸ್ವಾಮಿ, ಅಶ್ವತ್ಥನಾರಾಯಣ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರಾಮಚಂದ್ರಪ್ಪ, ಸಿ.ವಿ.ಲೋಕೇಶ್‌ಗೌಡ, ಪುರಸಭಾ ಸದಸ್ಯರಾದ ಬಾಲಕೃಷ್ಣ, ಚಿಕ್ಕಮುನಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

