ಕೋಲಾರ

ಕನ್ನಡದ್ದೇ ಚಿಂತೆಮಣಿ

Published On :




ಚಿಂತಾಮಣಿ: ಕನ್ನಡಿಗರ ಅಭಿವೃದ್ಧಿ ಪರ ಚಿಂತನೆ ಮಾಡುವುದರ ಜೊತೆಗೆ ಗಡಿನಾಡು ಕನ್ನಡಿಗರ ಸ್ಥಿತಿಗತಿಗಳ ಬಗ್ಗೆ ಚಿಂತನೆ ಈಗ ಅನಿವಾರ್ಯವಾಗಿದೆ ಎಂದು ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸಿ.ಬಿ.ಹನುಮಂತಪ್ಪ ಹೇಳಿದರು.
ನಗರದ ಬಾಲಕರ ಪ್ರಥಮ ದರ್ಜೆ ಕಾಲೇಜು ಆವರಣದ ಭಾರತ ರತ್ನ ಡಾ.ಸಿ.ಎನ್.ಆರ್.ರಾವ್ ವೇದಿಕೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸಿ.ಬಿ.ಹನುಮಂತಪ್ಪ ಮಾತನಾಡಿ, ಕನ್ನಡ ಶಾಲೆಗಳ ಉಳಿವಿಗೆ ಅಂತಿಮವಾಗಿ ಕೈಗೊಳ್ಳಬೇಕಾದ ಕ್ರಮ ಸರ್ಕಾರದ ನಿಲುವಿನ ಮೇಲೆ ಆಧಾರವಾಗಿದೆ. ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ ಪ್ರಕರಣ ಬಗ್ಗೆಯೂ ಸರ್ಕಾರ ಚಿಂತಿಸಬೇಕು. ಗೋವಾ ಸರ್ಕಾರ ಜತೆ ಚರ್ಚಿಸಿ ಅವರಿಗೆ ಪುರ್ನವಸತಿ ಕಲ್ಪಿಸಿಕೊಡಬೇಕು ಎಂದರು.
ಕನ್ನಡ ಭಾಷೆಗೆ ಕನ್ನಡ ಜನತೆಗೆ ನಾಡಿನಲ್ಲಿ ಸಾರ್ವಭೌಮರಾಗಿ ಗೌರವಿಸಬೇಕು. ಅನ್ಯ ಭಾಷಿಕರು ಕನ್ನಡವನ್ನು ಕಲಿತು, ಮಾತನಾಡಬೇಕು. ಕನ್ನಡ ನೆಲ-ಜಲ ಬಗ್ಗೆ ಗೌರವಿಸಬೇಕು. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಹಾಗೂ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದು ತೀವ್ರ ನೋವಿನ ಸಂಗತಿಯಾಗಿದೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ಸಮ್ಮೇಳನ ಅಧ್ಯಕ್ಷ ಸಿ.ಬಿ.ಹನುಮಂತಪ್ಪ ರಚಿಸಿರುವ ಅನುರಾಗ ಕವನ ಸಂಕಲನವನ್ನು ಕೃಷಿ ಸಚಿವ ಕೃಷ್ಣಬೈರೇಗೌಡ, ಶಾಸಕರಾದ ರಮೇಶ್ ಕುಮಾರ್, ಜೆ.ಕೆ.ಕೃಷ್ಣಾರೆಡ್ಡಿ, ಎಂಎಲ್ಸಿ ತೂಪಲ್ಲಿ ಚೌಡರೆಡ್ಡಿ ಲೋಕಾರ್ಪಣೆ ಮಾಡಿದರು. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಇದೇ ವೇಳೆ ಸನ್ಮಾನಿಸಲಾಯಿತು. ಜಿಲ್ಲಾ ಕಸಾಪ ಅಧ್ಯಕ್ಷ ವೈ.ಎಲ್.ಹನುಮಂತರಾವ್, ತಹಸೀಲ್ದಾರ್ ಜಿ.ವಿ.ಹನುಮಂತರೆಡ್ಡಿ, ಬಿಇಒ ಕೆ.ಜಿ.ರಂಗಯ್ಯ, ಕೋಮುಲ್ ನಿರ್ದೇಶಕ ಅಶ್ವತ್ಥನಾರಾಯಣಬಾಬು, ನಗರಸಭಾ ಅಧ್ಯಕ್ಷ ಜಿಯಾವುಲ್ಲಾ ರೆಹಮಾನ್, ತಾಪಂ ಅಧ್ಯಕ್ಷ ಸ್ಕೂಲ್ ಸುಬ್ಬಾರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಜನಾರ್ದನರೆಡ್ಡಿ, ತಾಲೂಕು ಕಸಾಪ ಅಧ್ಯಕ್ಷ ನಾಗರಾಜ್, ನಗರಸಭಾ ಆಯುಕ್ತ ಪದ್ಮನಾಭ್, ಇಒ ವಸಂತ್ಕುಮಾರ್ ಸೇರಿದಂತೆ ಇನ್ನೂ ಹಲವು ವಿವಿಧ ಇಲಾಖೆ ಸಂಘ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.