ಸಾಹಿತ್ಯ ಕ್ಷೇತ್ರದಲ್ಲೂ ರಾಜಕಾರಣ ದರ್ಶನ
ಚಿಂತಾಮಣಿ: ರಾಜಕಾರಣದಂತೆ ಸಾಹಿತ್ಯ ಕ್ಷೇತ್ರದಲ್ಲಿಯೂ ಸಹ ಲಾಬಿ ಮತ್ತು ಆಸೆ ಆಮಿಷಗಳಿಂದ ಸ್ಥಾನ ಮಾನಗಳಿಗಾಗಿ ನಡೆಯುತ್ತಿರುವ ತೀವ್ರ ಪೈಪೋಟಿ ಬಗ್ಗೆ ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ಅಸಮಧಾನ ವ್ಯಕ್ತಪಡಿಸಿದರು. ಗಡಿ ಭಾಗದಲ್ಲಿ ಕನ್ನಡ ಹಬ್ಬಗಳನ್ನು ಹೆಚ್ಚು ಹೆಚ್ಚು ನಡೆಸುವುದರಿಂದ ಕನ್ನಡ ಭಾಷೆ, ನೆಲ-ಜಲ ಹೆಚ್ಚು ಅಭಿವೃದ್ಧಿ ಹೊಂದಲು ಸಹಕಾರವಾಗಲಿದೆ. ಅನ್ಯ ಭಾಷಿಕರು ಕನ್ನಡ ಭಾಷೆಯನ್ನು ಕಲಿತು ಕನ್ನಡ ಮಾತನಾಡಬೇಕು ಎಂದು ಅವರು ಹೇಳಿದರು. ತಡವಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ಕೃಷಿ ಸಚಿವ ಕೃಷ್ಣಬೈರೇಗೌಡ ಮಾತನಾಡಿದರು. ಎಂಎಲ್ಸಿ ತೂಪಲ್ಲಿ ಚೌಡರೆಡ್ಡಿ ಮಾತನಾಡಿ, ಗಡಿಭಾಗವಾದ ಚಿಂತಾಮಣಿಯಲ್ಲಿ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವು ಯಶಸ್ವಿಯಾಗಿ ನಡೆಸಲು ಪಣತೊಟ್ಟಿರುವ ಶಾಸಕ ಕೃಷ್ಣಾರೆಡ್ಡಿ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, 3ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ ಸಹಕರಿಸುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

