ಕೋಲಾರ

ಕುಡಿವ ನೀರಿನ ಸಮಸ್ಯೆಗೆ ಪರಿಹಾರ

Published On :

ಬಂಗಾರಪೇಟೆ: ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಎಸ್‌ಎಫ್ಸಿ ವಿಶೇಷ ಅನುದಾನದಲ್ಲಿ ಮಂಜೂರಾಗಿರುವ 2ಕೋಟಿ ವೆಚ್ಚದಲ್ಲಿ 25 ಕೊಳವೆ ಬಾವಿಗಳನ್ನು ಕೊರೆಸಿ ಸಮಸ್ಯೆ ನೀಗಿಸುವುದಾಗಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಹೊರವಲಯದಲ್ಲಿರುವ ಅತ್ತಿಗಿರಿಕೊಪ್ಪದ ಕೆರೆಯಲ್ಲಿ 25 ಕೊಳವೆ ಬಾವಿಗಳನ್ನು ಕೊರೆಸಿ ನಾಗರಿಕರಿಗೆ ನೀರು ಪೂರೈಸಲು ಮುಖ್ಯಮಂತ್ರಿ ಬಳಿ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗಿತ್ತು. ಕೆರೆಯಲ್ಲಿ ಬೋರ್ ಕೊರೆಸುವ ಕಾರ್ಯಕ್ಕೆ ಶಾಸಕರು ಚಾಲನೆ ನೀಡಿದರು. ಈ ವೇಳೆ ಪುರಸಭೆ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷ ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಸದಸ್ಯರಾದ ಶಫಿ, ರಾಜಣ್, ವೆಂಕಟೇಶ್‌ಗೌಡ,ಬಿ.ಸಿ. ಮೂರ್ತಿ, ವೇದಾವತಿ ಪ್ರಭಾಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


ಕುಡಿವ ನೀರಿನ ಸಮಸ್ಯೆಗೆ ಪರಿಹಾರ