ಪೈಪೋಟಿಯತ್ತ ಮಾದ್ಯಮ: ಶಾಸಕ ರಾಜಣ್ಣ
ಶಿಡ್ಲಘಟ್ಟ: ನಾಡಹಬ್ಬದಂತೆ ಪತ್ರಿಕಾ ದಿನಾಚರಣೆಯನ್ನು ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಆಚರಿಸುತ್ತಿರುವುದು ಸಂತಸದ ವಿಷಯ ಎಂದು ಶಾಸಕ ರಾಜಣ್ಣ ಹೇಳಿದರು.
ಪಟ್ಟಣದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಪತ್ರಿಕಗೆಳು ಮಹತ್ತರ ಪಾತ್ರ ವಹಿಸುತ್ತಿದ್ದು, ಆಧುನಿಕ ತಂತ್ರಜ್ಞಾನದಿಂದ ಪೈಪೋಟಿಯತ್ತ ಸಾಗಿರುವ ಮಾದ್ಯಮ ತನ್ನ ನೈಜತೆಯನ್ನು ಕಳೆದುಕೊಳ್ಳುವ ಸಾಧ್ಯತೆ ಇದ್ದು, ವರದಿಗಾರರು ಸತ್ಯಾಂಶವನ್ನು ತಿಳಿಸುವ ನಿಟ್ಟಿನಲ್ಲಿ ದುಡಿಯಬೇಕಾಗಿದೆ ಎಂದು ತಿಳಿಸಿದರು.
ಕಾರ್ಯನಿರತ ಪತ್ರಕರ್ತರ ಸಂಘಧ ಜಿಲ್ಲಾಧ್ಯಕ್ಷ ಜಯರಾಮ್ ಮಾತನಾಡಿ, ಮಕ್ಕಳ ಪ್ರತಿಭೆ ಗುರುತಿಸುವ ಕೆಲಸವನ್ನು ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದು, ಪರಿಸ್ಥಿತಿಗಳಿಗೆ ಅನುಗುಣವಾಗಿ ಪತ್ರಿಕಾ ರಂಗ ಬದಲಾವಣೆಯಾಗುತ್ತಿದೆ ಎಂದರು.
ಹಿರಿಯ ಪತ್ರಕರ್ತ ರೂಪಸಿ ರಮೇಶ್ ಮಾತನಾಡಿ, ಆರಂಭದಲ್ಲಿ ತಾಲೂಕಿನಲ್ಲಿ 4 ಮಂದಿ ವರದಿಗಾರರಿದ್ದು, ಇಂದು ಪತ್ರಿಕೆಗಳು ಹೆಚ್ಚಾಗಿ ವರದಾರರೂ ಹೆಚ್ಚಾಗುವ ಜೊತೆಗೆ ಜವಾಬ್ದಾರಿಗಳೂ ಹೆಚ್ಚಾಗಿವೆ ಎಂದರು.
ಪಟ್ಟಣದ ಶಾಲೆಗಳ ಎಲ್ಕೆಜಿ ಯಿಂದ ಒಂದನೇ ತರಗತಿ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಏರ್ಪಡಿಲಸಾಗಿದ್ದು, ನಾನಾ ರೀತಿಯ ವೇಷ ಭೂಷಣಗಳಿಂದ ಮಕ್ಕಳು ಕಂಗೊಳಿಸಿದರು.
ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಯಿತು. ಪಟ್ಟಣದ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಅವರಿಗೂ ಬಹುಮಾನಗಳನ್ನು ವಿತರಿಸಲಾಯಿತು.
ಪುರಸಭಾ ಅಧ್ಯಕ್ಷ ಮುಷ್ಠರಿ ತನ್ವೀರ್ ಪಾಷ, ತಾಲೂಕು ಬಿಜೆಪಿ ಅಧ್ಯಕ್ಷ ಸುರೇಂದ್ರ ಗೌಡ, ಜಿಪಂ ಸದಸ್ಯ ಎಸ್.ಎಂ. ನಾರಾಯಣಸ್ವಾಮಿ, ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಭಕ್ತರ ಹಳ್ಳಿ ಬೈರೆಗೌಡ, ರೇಷ್ಮೆ ಬೆಳೆಗಾರರ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷ ಮಳ್ಳೂರು ಹರೀಶ್, ತಾಲೂಕಿನ ಎಲ್ಲ ಪತ್ರಕರ್ತರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

