ಕೋಲಾರ

ಅತ್ಯಾಚಾರ ಖಂಡಿಸಿ ಪ್ರತಿಭಟನೆ

Published On :

ಗುಡಿಬಂಡೆ: ರಾಜ್ಯದಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಎಸ್‌ಎಫ್‌ಐ ತಾಲೂಕು ಘಟಕದ ನೇತೃತ್ವದಲ್ಲಿ ಪಟ್ಟಣದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಈ ವೇಳೆ ತಹಸೀಲ್ದಾರರಿಗೆ ಮನವಿ ಅರ್ಪಿಸಿ ಮಾತನಾಡಿದ ಘಟಕದ ರಾಜ್ಯ ಸಮಿತಿ ಸದಸ್ಯ ಈಶ್ವರಪ್ಪ, ಬೆಂಗಳೂರು ಮತ್ತಿತರ ಕಡೆ ಮಹಿಳೆಯರ ಮೇಲೆ ನಿರಂತರ ಅತ್ಯಾಚಾರಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಇವುಗಳನ್ನು ತಡೆಯಲು ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಸರ್ಕಾರ ಕೂಡಲೇ ನಿದ್ದೆಯಿಂದ ಎಚ್ಚೆತ್ತು ಸೂಕ್ತ ರಕ್ಷಣೆ ಕಲ್ಪಿಸುವತ್ತ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ. ಪ್ರತಿಭಟನೆಗೂ ಮುನ್ನ ಪಟ್ಟಣದ ಮುಖ್ಯ ಬೀದಿಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮಿನಿವಿಧಾನ ಸೌಧ ಕಚೇರಿ ಮುಂದೆ ಧರಣಿ ನಡೆಸಿದರು. ಅಂಬರೀಶ್, ಮಂಜು, ಮಂಜುನಾಥ್, ಮುಜಾಸಿಂ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.