ಅತ್ಯಾಚಾರ ಪ್ರಕರಣಗಳಿಗೆ ಖಂಡನೆ
ಕೋಲಾರ: ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದ್ದು, ಇದನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾವೇದಿಕೆಯಿಂದ ತಾಲೂಕಿನ ವೇಮಗಲ್ನಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು.
ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು, ಮಹಿಳೆಯರು ಕರವೇ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಕೋಲಾರ-ಚಿಕ್ಕಬಳ್ಳಾಪುರ ಮುಖ್ಯರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ್ದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ಕಳೆದ ಒಂದು ವಾರದಿಂದ 10ಕ್ಕೂ ಹೆಚ್ಚು ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ, ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆ ವೈಫಲ್ಯವೇ ಇದಕ್ಕೆ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ವೇಮಗಲ್ ಪಿ.ಎಸ್.ಐ ಯಶ್ವಂತ್ರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ, ಕರವೇ ಅಧ್ಯಕ್ಷ ನಾಗೇಶ್, ಎನ್. ಸಂಪಂತ್ಕುಮಾರ್, ವೇಮಗಲ್ ಹೋಬಳಿ ಅಧ್ಯಕ್ಷ ನಾಗೇಶ್, ಸಂಪತ್ಕುಮಾರ್, ಕೆಂಪೇಗೌಡ ಯುವ ಸೇನೆ ಮುಖಂಡ ಹರೀಶಗೌಡ, ವೇಮಗಲಲ್ಹೋಬಳಿ ಗ್ರಾಪಂ ಮಾಜಿ ಅಧ್ಯಕ್ಷ ಜರಿನಾತಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

