ಲೈಂಗಿಕ ದೌರ್ಜನ್ಯದಿಂದ ಸಾಮಾಜಿಕ ಅವಮಾನ
ಚಿಕ್ಕಬಳ್ಳಾಪುರ: ಇಂದಿನ ಸಮಾಜದಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲೆ ಹೆಚ್ಚಿಗೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳಿಂದ ನಾಗರಿಕ ಸಮಾಜವು ತಲೆತಗ್ಗಿಸುವಂತಾಗಿದೆ ಎಂದು ಶಾಸಕ ಡಾ.ಕೆ. ಸುಧಾಕರ್ ವಿಷಾದ ವ್ಯಕ್ತಪಡಿಸಿದರು.
ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದಡಿಯಲ್ಲಿ ನಿರ್ಮಿಸಿರುವ ಸರ್ಕಾರಿ ಪ್ರೌಢಶಾಲೆಯ ಅನ್ನಪೂರ್ಣ ಅಡುಗೆ ಕೋಣೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಿಗೆ ನಡೆಯುತ್ತಿವೆ. ಇವುಗಳನ್ನು ದೂರ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು.
ಪ್ರಮುಖವಾಗಿ ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿ ಬಾಲ್ಯದಲ್ಲೇ ಮೌಲ್ಯಾಧಾರಿತ ಗುಣಗಳನ್ನು ಬೆಳೆಸಿ ಉತ್ತಮ ಸಮಾಜ ನಿರ್ಮಾಣ ಮಾಡಲು ಕಾರ್ಯ ಪ್ರವೃತ್ತರಾಗಬೇಕೆಂದು ತಿಳಿಸಿದರು. ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ಮುಖ್ಯವಾದುದು. ಅದೇ ರೀತಿ ಮಕ್ಕಳಲ್ಲಿ ನೈತಿಕ, ಮಾನವೀಯ ಮೌಲ್ಯ, ಉತ್ತಮ ವ್ಯಕ್ತಿತ್ವವನ್ನು ರೂಪಿಸಲು ಪೂರಕವಾದ ಕಾರ್ಯಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಕೈಗೊಳ್ಳಬೇಕೆಂದರು. ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಕ್ಷೀರಭಾಗ್ಯ ಉತ್ತಮ ಯೋಜನೆಯಾಗಿದ್ದು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪಣತೊಟ್ಟಿದೆ.
ಇದರಲ್ಲಿ ಯಶಸ್ಸನ್ನು ಸಾಧಿಸಲು ಪ್ರತಿಯೊಬ್ಬರು ಸಹಕಾರ ನೀಡಬೇಕೆಂದರು. ಪೆರೇಸಂದ್ರ ಗ್ರಾಮದ ಶಾಲೆಗೆ ಹೆಚ್ಚುವರಿಯಾಗಿ 12 ಕೊಠಡಿಗಳು ಮಂಜೂರಾಗಿದ್ದು, ಈಗಾಗಲೇ 74 ಲಕ್ಷ ರೂಗಳ ಅನುದಾನ ಬಿಡುಗಡೆಯಾಗಿದೆ. ಸರ್ಕಾರದ ಅನುದಾನದಲ್ಲಿ ಕೈಗೊಳ್ಳುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕೆಂದರು.
ಜಿ.ಪಂ. ಮಾಜಿ ಸದಸ್ಯ ಪಿ.ಎನ್. ಕೇಶವರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶ್ರೀರಾಮರೆಡ್ಡಿ, ಪೆರೇಸಂದ್ರ ಗ್ರಾ.ಪಂ. ಅಧ್ಯಕ್ಷ ಶಾಂತಾಸುರೇಶ್, ಪೆರೇಸಂದ್ರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

