ಕೋಲಾರ

ಜಿಲ್ಲಾಡಳಿತ ವಿರುದ್ಧ ದಸಂಸ ಪ್ರತಿಭಟನೆ

Published On :

ಚಿಕ್ಕಬಳ್ಳಾಪುರ: ಬರಪೀಡಿತ ಜಿಲ್ಲೆಯಲ್ಲಿ ಜನರು ತೊಂದರೆಯನ್ನು ಅನುಭವಿಸುತ್ತಿದ್ದರೂ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತ ತನ್ನ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು. ಪರಿಹಾರ ಕಾರ್ಯಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬೃಹತ್ ಪ್ರತಿಭಟನೆ ಪ್ರತಿಭಟನೆ ನಡೆಸಿತು.
ನಗರದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತ ಭವನದ ಮುಂದೆ ಧರಣಿ ಕುಳಿತ ಪ್ರತಿಭಟನಾಕಾರರು, ಶೋಷಿತ ಸಮುದಾಯ, ಕೂಲಿ ಕಾರ್ಮಿಕರು, ಕಡುಬಡುವರು ಸರ್ಕಾರದ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ. ಕಳೆದ ಎರಡ್ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಬರದ ವಾತಾವರಣ ನಿರ್ಮಾಣವಾಗಿದ್ದರೂ ಸಹ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಜನರು ಅನೇಕ ಸಮಸ್ಯೆಗಳಿಗೆ ಗುರಿಯಾಗಿ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಹಿಂದಿನಿಂದಲೂ ಶೋಷಿತ ಸಮುದಾಯದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತಿದ್ದರೂ ಸಹ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಸಂಚಾಲಕ ಬಿ.ಎನ್. ಗಂಗಾಧರ್ ಆರೋಪಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ವಿಜಯನರಸಿಂಹ, ಡಿ.ಎಂ.ನರಸಿಂಹಯ್ಯ, ಕಡಿಲು ವೆಂಕಟರಮಣಪ್ಪ, ಚಂದ್ರಣ್ಣ, ಶ್ರೀನಿವಾಸ್  ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.