ಕೋಲಾರ

ಮೊಮ್ಮಗಳ ಮೇಲೆ ತಾತನ ಅತ್ಯಾಚಾರ

Published On :

ಚಿಂತಾಮಣಿ: ನಾರಮಾಕಲಹಳ್ಳಿ ಗ್ರಾಮದ ಬಾಲಕಿಯೊಬ್ಬಳ ಮೇಲೆ ಆಕೆಯ ಸಂಬಂಧಿ ತಾತ ಅತ್ಯಾಚಾವೆಸಗಿದ ಘಟನೆ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳವಾರ ಮುರುಗಮಲ್ಲ ಹೋಬಳಿ ನಾರಮಾಕಲಹಳ್ಳಿ ಗ್ರಾಮದ 17 ವರ್ಷ ವಯಸ್ಸಿನ ರೂಪಾ(ಹೆಸರು ಬದಲಾಯಿಸಲಾಗಿದೆ) ಬಾಯಿಗೆ ಬಟ್ಟೆ ತುರುಕಿ, ನಿರ್ಜನ ಪ್ರದೇಶಕ್ಕೆ ಕೆದುಕೊಂಡು ಹೋಗಿ 65 ವರ್ಷ ವಯಸ್ಸಿನ ತಾತ ಅತ್ಯಾಚಾರ ನಡೆಸಿದ್ದಾನೆ. ಈ ಬಗ್ಗೆ ಸಂತ್ರಸ್ತೆ ದೂರು ದಾಖಲಿಸಿದ್ದಾರೆ.
ಸಾಯಿಸುವ ಬೆದರಿಕೆ: ಅತ್ಯಾಚಾರಕ್ಕೊಳಗಾದ ಬಾಲಕಿ ಬಟ್ಲಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ 1.30 ಗಂಟೆ ಸಮಯದಲ್ಲಿ ನಮ್ಮ ಮನೆಯಲ್ಲೇ ಊಟ ಮಾಡಿ ನಂತರ ನಾನು ಹೊರಗೆ ಹೋಗುವ ಸಂದರ್ಭದಲ್ಲಿ ತಾತ ಹಿಂಬಾಲಿಸಿಕೊಂಡು ಬಂದು ಅತ್ಯಾಚಾರ ಎಸಗಿದ್ದಾನೆ. ಈ ವಿಷಯವನ್ನು ಮನೆಯಲ್ಲಿ ತಿಳಿಸಿದರೆ ಕೊಲ್ಲುವ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಎದರು ಬಾಲಕಿ ತನ್ನ ಗೋಳು ತೋಡಿಕೊಂಡಿದ್ದಾಳೆ. ಆರೋಪಿ ತಾತ ಅತ್ಯಾಚಾರ ನಡೆಸಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ಆರೋಪಿಯನ್ನು ಕೂಡಲೇ ಬಂಧಿಸುವಂತೆ ವಿವಿಧ ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ. ಪಿಎಸ್‌ಐ ಹೊನ್ನೇಗೌಡ ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.