ಕೋಲಾರ

ಅಂಗನವಾಡಿ ಕಾರ್ಯಕರ್ತೆ ನೇಣಿಗೆ ಶರಣು

Published On :

ಚಿಂತಾಮಣಿ: ಜೀವನದಲ್ಲಿ ಬೇಸತ್ತು ಅಂಗನವಾಡಿ ಕಾರ್ಯಕರ್ತೆ ನೇಣಿಗೆ ಶರಣಾಗಿರುವ ಘಟನೆ ಭಕ್ತರಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಭಕ್ತರಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಜೆಸ್ಸಿಂತಾ ಬಿನ್ ರಾಮನ್ನ ಅಲಿಯಾಸ್ ಜಾರ್ಜ್  ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಗೃಹಿಣಿ ಕಳೆದ ಹಲವು ದಿನಗಳಿಂದ ಹೊಟ್ಟೆನೋವನ್ನು ತಾಳದೆ ನರಳುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣಿಗೆ ಶರಣಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹೆಣ್ಣು ಶಿಶು ಶವ ಪತ್ತೆ
ಮುಳಬಾಗಲು: ತಲೆ ಜಜ್ಜಿದ ಸ್ಧಿತಿಯಲ್ಲಿ ಹೆಣ್ಣು ಶಿಶು ಶವ ಪಟ್ಟಣದ ಎಂ.ಎನ್. ಹಳ್ಳಿ ರಸ್ತೆಯ ಅಂಬೇಡ್ಕರ್ ನಗರದ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದ ಪೊದೆಯೊಳಗೆ ಮಂಗಳವಾರ ಸಂಜೆ ದೊರೆಕಿದೆ. ಮುಳಬಾಗಲು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ವಿಚಾರಣಾಧೀನ ಕೈದಿಗೆ ಇರಿತ
ಕೋಲಾರ: ನಗರದ ಉಪ ಬಂದಿಖಾನೆಯಲ್ಲಿ ಬುಧವಾರ ವಿಚಾರಣಾಧೀನ ಕೈದಿಯ ಮೇಲೆ ಕೈದಿಗಳ ಗುಂಪು ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಕೈದಿ ಜಮೀಲ್ ಪಾಷ ಎಂಬುವನನ್ನು ಜೈಲಿನ ಸಿಬ್ಬಂದಿ ಜಿಲ್ಲಾ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಕೊಡಿಸಿ ಮತ್ತೆ ವಾಪಸ್ ಕರೆದುಕೊಂಡು ಹೋಗಿದ್ದಾರೆ.  ಸಂತೋಷ, ಬಾಬು, ಮಣಿಕಂಠ, ಮಂಜು ಮತ್ತು ರಾಜು ಎಂಬುವರು ತನ್ನ ಮೇಲೆ ಹಲ್ಲೆ ಮಾಡಿರುವುದು ಗಾಯಾಳು ದೂರಿದ್ದಾನೆ. ಆದರೆ ಜೈಲಿನ ಅಧಿಕಾರಿಗಳು ಯಾವುದೇ ಘಟನೆ ನಡೆದಿಲ್ಲವೆಂದು ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿರುವುದು ಅನುಮಾನಕ್ಕೆ ಎಡೆ ಮಾಡಿದೆ.  ಶೌಚಾಲಯಕ್ಕೆ ಹೋಗುವ ವಿಚಾರದಲ್ಲಿ ಜಮೀಲ್ ಪಾಷ ಮತ್ತು ಅಲ್ಲಿನ ಇತರ ಕೈದಿಗಳ ನಡುವೆ ಸಣ್ಣ ಜಗಳವಾಗಿತ್ತು. ಇದೇ ಘರ್ಷಣೆಗೆ ಕಾರಣ ಎನ್ನಲಾಗಿದೆ.
ಜುಗುಪ್ಸೆ: ವ್ಯಕ್ತಿ ಆತ್ಮಹತ್ಯೆ
ಟೇಕಲ್: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆ.ಜಿ. ಹಳ್ಳಿಯ ಹರೀಶ(32) ಮೃತ ವ್ಯಕ್ತಿ. ಈ ಬಗ್ಗೆ ಟೇಕಲ್ ಹೊರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಿಳೆ ಆತ್ಮಹತ್ಯೆ
ಟೇಕಲ್: ಸಮೀಪದ ನಾರಾಯಣಪುರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಗೃಹಿಣಿ ಸೀಮೆಎಣ್ಣೆ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಗೀತಾ (25) ಮೃತ ಮಹಿಳೆ. ಈ ಸಂದರ್ಭದಲ್ಲಿ ಗಂಡ ವೆಂಕಟೇಶ್ ತಡೆಯಲು ಹೋಗಿ ಅವರಿಗೂ ಸುಟ್ಟ ಗಾಯಗಳಾಗಿದ್ದು ಆತನನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.