ಕೋಲಾರ

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ

Published On :

ಕೋಲಾರ: ಬುದ್ದಿಮಾಂದ್ಯ ಯುವತಿ ಮೇಲೆ ಗ್ರಾಪಂ ನೌಕರನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ತಾಲೂಕಿನ ನಾಯಕರಹಳ್ಳಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ, ಈ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನಾರೆಪ್ಪ ಎಂಬುವನನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಗ್ರಾಮದಲ್ಲಿ ಕಳೆದ ಮಂಗಳವಾರ ಸಂಜೆ ಸುಮಾರು 5 ಗಂಟೆಯಲ್ಲಿ ಆರೋಪಿ ವಿವಾಹಿತ ನಾರೆಪ್ಪ (35) ಯುವತಿಯನ್ನು ನೀಲಗಿರಿ ತೋಪಿಗೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದು, ಈ ಘಟನೆಯ ಬಗ್ಗೆ ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನೆಂದು ದೌರ್ಜನ್ಯಕ್ಕೆ ಒಳಗಾದ ಯುವತಿ ತಡವಾಗಿ ಪೋಷಕರಿಗೆ ತಿಳಿಸಿದ್ದಾಳೆ.
ಘಟೆನೆ ಬಗ್ಗೆ ಗ್ರಾಮದ ಮುಖಂಡರೊಂದಿಗೆ ಚರ್ಚಿಸಿ ಕೋಲಾರ ಗ್ರಾಮಾಂತರ ಪೊಲೀಸರಿಗೆ ಬುಧವಾರ ತಡವಾಗಿ ದೂರು ನೀಡಲಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಯುವತಿ ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗ್ರಾಮಕ್ಕೆ ಮತ್ತು ಆಸ್ಪತ್ರೆಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ವಿರುದ್ಧ ಅನೇಕ ಸಂಘಟನೆಗಳು ಈಗಾಗಲೇ ಪ್ರತಿಭಟನೆಗಳು ನಡೆಸಿವೆ. ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಜನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಆದರೂ ಕಾಮ ದಹನ ಮುಂದುವರಿದಿರುವುದಕ್ಕೆ ಜನತೆ ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.