ಕೋಲಾರ

ಮರಳಿ ಶಾಲೆಗೆ ಕರೆತರುವ ಅಭಿಯಾನ ಯಶಸ್ವಿ

Published On :

ಟೇಕಲ್: ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ನಿಟ್ಟಿನಲ್ಲಿ ಕೆ.ಜಿ. ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಭಿಯಾನದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಪೋಷಕರ ಮನವೊಲಿಸಿ ಮತ್ತೆ ಶಾಲೆಗೆ ದಾಖಲಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಉಪಾಧ್ಯಕ್ಷ ಎ.ಕೆ. ವೆಂಕಟೇಶ್ ಮಾತನಾಡಿ, ಪೋಷಕರು ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಕೈಜೋಡಿಸಬೇಕೆಂದರು.ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಕೆ.ಜಿ.ಹಳ್ಳಿ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸಲಾಯಿತು.ಜಾಥಾದಲ್ಲಿ ಮುಖ್ಯಶಿಕ್ಷಕ ವೆಂಕಟೇಶಪ್ಪ, ದೈಹಿಕ ಶಿಕ್ಷಕಿ ವೆಂಕಟಲಕ್ಷ್ಮಮ್ಮ, ಮುನಿರಾಜು, ಮಲ್ಲಿಕಾರ್ಜುನ್, ಸುರೇಶ್ ಇದ್ದರು.
ಕೋರಂ ಇಲ್ಲದ ಸಭೆಗಳು: ಅಭಿವೃದ್ಧಿ ಕುಂಠಿತ
ಟೇಕಲ್: ಜುಲೈನಲ್ಲಿ ಟೇಕಲ್ ಗ್ರಾಪಂ ಸಾಮಾನ್ಯ ಸಭೆ ಗ್ರಾಪಂ ಅಧ್ಯಕ್ಷೆ ಮಂಜುಳಾ ಶಿವಣ್ಣರ ಅಧ್ಯಕ್ಷತೆಯಲ್ಲಿ ಎರಡು ಬಾರಿ ನಡೆದಿದ್ದು, ಗ್ರಾಪಮನಲ್ಲಿ ಒಟ್ಟು ಸದಸ್ಯರು 15 ಇದ್ದು ಐದು ಸದಸ್ಯರು ಮಾತ್ರ ಸಭೆಗೆ ಹಾಜರಾದ ಕಾರಣ ಕೋರಂ ಇಲ್ಲದೆ ಸಭೆ ರದ್ದು ಪಡಿಸಿದ ಘಟನೆ ನಡೆದಿದೆ. ಎಲ್ಲಾ ಸದಸ್ಯರು ಕೂಡಿ ಸಭೆ ನಡೆಸಿದರೆ ಪಂಚಾಯ್ತಿ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂಬುದು ಪಂಚಾಯ್ತಿಯ ವ್ಯಾಪ್ತಿಯ ಜನತೆಯ ಅಳಲಾಗಿದೆ.
ಆರೋಗ್ಯ ತಪಾಸಣಾ ಶಿಬಿರ
ಗೌರಿಬಿದನೂರು: ತಾಲೂಕು ಕಚೇರಿಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಕಾರ್ಯಕಾರಿ ಸಮಿತಿ ಸದಸ್ಯರ ತ್ರೈಮಾಸಿಕ ಸಭೆ ನಡೆಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ತಹಸೀಲ್ದಾರ್ ಡಾ.ಎನ್. ಭಾಸ್ಕರ್ ವಹಿಸಿ ಮಾತನಾಡಿ, ರೆಡ್ ಕ್ರಾಸ್ ಘಟಕ ಈವರೆಗೆ ಒಟ್ಟು481 ಆಜೀವ ಸದಸ್ಯರನ್ನು 9ಮಂದಿ ಪೋಷಕ ಸದಸ್ಯರನ್ನು ಹೊಂದಿದ್ದು, ಅನೇಕ ರಕ್ತದಾನ ಶಿಬಿರಗಳನ್ನು ಹಮ್ಮಿಕೊಂಡಿದೆ. ಮುಂದಿನ ತಿಂಗಳು ಪಟ್ಣದ ರೇಮೆಂಡ್ಸ್ ಕಾರ್ಖಾನೆ ಮತ್ತು ನ್ಯಾಷನಲ್ ಕಾಲೇಜಿನಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದರು.ಆ.19 ರಂದು ರೆಡ್ ಕ್ರಾಸ್ ಮತ್ತು ಪುರಸಭೆ ಆಶ್ರಯದಲ್ಲಿ ಆರೋಗ್ಯ ತಪಾಸಣೆ ಮತ್ತು ಮಾನಸಿಕ ಹಾಗೂ ವಿಕಲಚೇತನರ ಜಾಗೃತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಇದರ ಉಪಯೋಗ ಪಡೆಯುವಂತೆ ಕೋರಿದರು.ರೆಡ್ ಕ್ರಾಸ್ ಜಿಲ್ಲಾ ಕಾರ್ಯದರ್ಶಿ ನಾರಾಯಣ ಚಾರಿ, ಕಾರ್ಯ ನಿರ್ವಹಣಾಧಿಕಾರಿ ಕೆ.ವಿ. ರೆಡ್ಡಪ್ಪ, ಕಾರ್ಯದರ್ಶಿ ಎಚ್.ಆರ್. ವೆಂಕಟರಾವ್, ಕೆ. ವರಾಹಮೂರ್ತಿ, ಖಜಾಂಚಿ ಎಸ್.ಎಸ್. ರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.