ಗುಡಿಬಂಡೆಯಲ್ಲಿ ಬಂದ್ ಯಶಸ್ವಿ
ಗುಡಿಬಂಡೆ: ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ ವಿವಿಧ ಸಂಘಟನೆಗಳು ನೀಡಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಬಂದ್ಗೆ ಗುಡಿಬಂಡೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬಂದ್ ಪ್ರಯುಕ್ತ ವರ್ತಕರು ಹಾಗೂ ಹೋಟೆಲ್ ಮಾಲೀಕರು ಬೆಳಿಗಿನಿಂದಲೇ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ಗೆ ಸಹಕರಿಸಿದರು. ಬಸ್, ಆಟೋ ಸೇರಿದಂತೆ ಯಾವುದೇ ಸಾರ್ವಜನಿಕ ವಾಹನಗಳು ರಸ್ತೆಗಿಳಿಯದ ಕಾರಣ ವಾಹನ ಸಂಚಾರ ವಿರಳವಾಗಿತ್ತು. ಶಾಲಾ ಕಾಲೇಜು, ಬ್ಯಾಂಕ್ಗಳು ಕಾರ್ಯ ನಿರ್ವಹಿಸಲು ಮುಂದಾದುವಾದರೂ ಪ್ರತಿಭಟನಾಕಾರರು ಬಾಗಿಲು ಮುಚ್ಚಿಸಿದರು. ಬಂದ್ ನೇತೃತ್ವ ವಹಿಸಿದ್ದ ಸಿಪಿಐಎಂ, ಜನವಾದಿ, ಮಹಿಳಾ ಸಂಘಟನೆ, ಜಯ ಕರ್ನಾಟಕ, ದಸಂವೇ ಮತ್ತು ಜೀವಿಕಾ ಪದಾಧಿಕಾರಿಗಳು ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಹಳೆ ಗುಡಿಬಂಡೆ ಲಕ್ಷೀನಾರಾಯಣ, ಜಯರಾಮರೆಡ್ಡಿ, ಬ್ರಾಹ್ಮರಣ ಹಳ್ಳಿ ಅಶ್ವತ್ಥಪ್ಪ, ದೇವರಾಜ್, ಪವಿತ್ರಾ ಸೇರಿದಂತೆ ಹಲವರಿದ್ದರು.
ಅತ್ಯಾಚಾರಕ್ಕೆ ಯತ್ನಿಸಿ ಪರಾರಿ
ಕೋಲಾರ: ಕೋಲಾರ ತಾಲೂಕಿನ ಎಚ್.ಜಿ ಹೊಸೂರು ಗ್ರಾಮದಲ್ಲಿ ಬುಧವಾರ ರಾತ್ರಿ ಮನೆಗೆ ನುಗ್ಗಿದ ಪುಂಡನೊಬ್ಬ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ವಿಫಲ ಯತ್ನ ಮಾಡಿ ಪರಾರಿಯಾಗಿದ್ದಾನೆ. ಮಹಿಳೆ ಮನೆಯಲ್ಲಿ ಒಂಟಿಯಾಗಿದ್ದಾಗ ಮನೆಗೆ ನುಗ್ಗಿದ ವೆಂಕಟರಾಮಪ್ಪ ಎಂಬುವನು ಮಹಿಳೆಯ ಮಾನ ಭಂಗಕ್ಕೆ ಯತ್ನಿಸಿ ಕುತ್ತಿಗೆ ಹಾಗೂ ಮೈಮೇಲೆ ಗಾಯಗೊಳಿಸಿ ಆಕೆ ಕೂಗಿಕೊಂಡಾಗ ಓಡಿ ಹೋಗಿದ್ದಾನೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

