2 ಕುಟುಂಬಗಳ ಗಲಾಟೆ: ತಾಯಿ ಮಗಳಿಗೆ ಗಾಯ
ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು ತಾಯಿ ಮತ್ತು ಮಗಳು ಗಾಯಗೊಂಡಿರುವ ಘಟನೆ ಸಂಭವಿಸಿದೆ. ತಾಲೂಕಿನ ಕೊಳವನಹಳ್ಳಿಯಲ್ಲಿ ಸರಸ್ವತಿ ಮತ್ತು ಆಕೆಯ ಮಗಳು ರಮ್ಯಳ ಮೇಲೆ ಚಾಕುವಿನಿಂದ ಹಲ್ಲೆ ನಡೆದಿದ್ದು ಇಬ್ಬರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗ್ರಾಮದಲ್ಲಿ ಮನೆಯ ವಿಷಯಕ್ಕೆ ಸಂಬಂಧಿಸಿದಂತೆ ಸರಸ್ವತಿ ಮತ್ತು ಪಿಳ್ಳೆಗೌಡ ಕುಟುಂಬದವರ ನಡುವೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಸರಸ್ವತಮ್ಮ ತಮ್ಮ ಮನೆಯ ಮುಂದೆ ಪಾತ್ರೆ ತೊಳೆಯವಾಗ ಬೇಕು ಬೇಕಂತಲೇ ಡಿಕ್ಕಿ ಹೊಡೆಯುವ ರೀತಿಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಪಿಳ್ಳೇಗೌಡ ಮತ್ತು ಮಗ ಶಶಿಕುಮಾರ್ ಗಲಾಟೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದಕ್ಕೆ ದೊಣ್ಣೆ ಮತ್ತು ಚಾಕುವಿನಿಂದ ಹಲ್ಲೆ ಮಾಡಿದ್ದಾರೆಂದು ತಾಯಿ ಮತ್ತು ಮಗಳು ಆರೋಪಿಸಿದ್ದಾರೆ. ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

