ಕೊಪ್ಪಳ

ಅಕ್ರಮ ಮದ್ಯ ಮಾರಾಟ ತಡೆಯಿರಿ: ಕರವೇ ಧರಣಿ

Published On :

ಕೊಪ್ಪಳ: ತಾಲೂಕಿನಲ್ಲಿ ಯಥೇಚ್ಛವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಈ ಕುರಿತು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಎಂದು ಆರೋಪಿಸಿ ನಗರದ ಕರವೇ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ತಾಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳಲ್ಲಿ ಮತ್ತು ಬೀಡಾ ಅಂಗಡಿಗಳಲ್ಲಿ ಅವ್ಯಾಹತವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮೀಣ ಪ್ರದೇಶದ ರೈತಾಪಿ ಜನರು ಮದ್ಯ ಸೇವನೆಯ ಚಟಕ್ಕೆ ಬಲಿಯಾಗುತ್ತಿದ್ದಾರೆ. ಇದರಿಂದಾಗಿ ಜೀವನದ ಬಂಡಿ ಸಾಗುತ್ತಿಲ್ಲ. ಇದಕ್ಕೆ ಜಿಲ್ಲಾಡಳಿತದ ಬೇಜವಾಬ್ದಾರಿಯೇ ಕಾರಣ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾನೂನು ಬಾಹಿರ ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು. ಇಲ್ಲವಾದರೆ ತೀವ್ರ ಹೋರಾಟ ಮಾಡಲಾಗವುದು ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡದರು. ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕರವೇ ತಾಲೂಕಾಧ್ಯಕ್ಷ ಆರ್. ವಿಜಯಕುಮಾರ, ಮಹಿಳಾ ಘಟಕದ ತಾಲೂಕಾಧ್ಯಕ್ಷೆ ಬಿಬಿಜಾನ್, ಗ್ರಾಮೀಣ ಘಟಕದ ಅಧ್ಯಕ್ಷ ಸ್ವಾಮಿನಾಥ್ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.