ಲೋಕಾಯುಕ್ತರಿಂದ ದೂರು ಆಹ್ವಾನ
ಕೊಪ್ಪಳ: ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕರು ಜ. 30ರಂದು ಗಂಗಾವತಿ ಮತ್ತು ಕೊಪ್ಪಳ ಹಾಗೂ ಜ. 31ರಂದು ಯಲಬುರ್ಗಾ ಮತ್ತು ಕುಷ್ಟಗಿ ಪ್ರವಾಸ ಕೈಗೊಂಡು, ಸಾರ್ವಜನಿಕರಿಂದ ಕುಂದುಕೊರತೆಗಳ ದೂರುಗಳನ್ನು ಸ್ವೀಕರಿಸಿ ಅಹವಾಲು ಆಲಿಸುವರು.
ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕರು ಜ. 30ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ಗಂಗಾವತಿ ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2.30 ರಿಂದ ಸಂಜೆ 5. 30ರ ವರೆಗೆ ಕೊಪ್ಪಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸುವರು.
ಜ. 31ರಂದು ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕರು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ಕುಷ್ಟಗಿಯ ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2. 30 ರಿಂದ ಸಂಜೆ 5. 30ರ ವರೆಗೆ ಯಲಬುರ್ಗಾ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸುವರು.
ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಬಗ್ಗೆ ಅರ್ಜಿ ನೀಡಿ ಸದುಪಯೋಗ ಪಡೆಯಲು ಕೋರಲಾಗಿದೆ. ಅಲ್ಲದೆ, ದೂರು ಸಲ್ಲಿಸಲು ಬೇಕಾಗುವ ಪ್ರಪತ್ರ ಸಂಖ್ಯೆ 1 ಮತ್ತು 2ರ ನಮೂನೆಯನ್ನು ಸ್ಥಳದಲ್ಲಿಯೇ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಆರಕ್ಷಕ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಕೊಪ್ಪಳ, ದೂ. 08539-220533 ಅಥವಾ 08539-220200ಕ್ಕೆ ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

