ಕೊಪ್ಪಳ

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಸೆರೆ

Published On :

ಕೊಪ್ಪಳ/ಯಲಬುರ್ಗಾ: ಅತ್ಯಾಚಾರ ಘಟನೆಗಳು ಪುನಾರವರ್ತನೆಗೊಳ್ಳುತ್ತಿದ್ದು, ಐದು ವರ್ಷದ ಬಾಲಕಿ ಮೇಲೆ 20 ವರ್ಷದ ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರಡಿ ಗ್ರಾಮದಲ್ಲಿ ನಡೆದಿರುವುದು ಗುರುವಾರ ಬೆಳಕಿಗೆ ಬಂದಿದೆ.
ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್ಪಿ ಸುರೇಶ್ ಮಸೂತಿ ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ.  ಬುಧವಾರ ಅಂಗನವಾಡಿಯಿಂದ ಮನೆಗೆ ಬಂದಿದ್ದ ಬಾಲಕಿ ಭಾವನಾ (ಹೆಸರು ಬದಲಾಯಿಸಲಾಗಿದೆ) ಮನೆಯಂಗಳದಲ್ಲಿ ಆಟವಾಡುತ್ತಿದ್ದಳು. ಅದೇ ಗ್ರಾಮದ ಹನುಮೇಶ್ ಆಕೆಗೆ ತಿನಿಸು ನೀಡುವುದಾಗಿ ಹೇಳಿ ಮನೆಯೊಳಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಬಾಲಕಿಯೊಂದಿಗೆ ಆಟವಾಡುತ್ತಲೇ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಳುತ್ತಿದ್ದ ಬಾಲಕಿಯನ್ನು ಸಮಾಧಾನಗೊಳಿಸಿ ಮನೆಗೆ ಕಳುಹಿಸಿದ್ದು, ನಡೆದ ವಿಷಯವನ್ನು ಮನೆಯವರಿಗೆ ತಿಳಿಸಿದಂತೆ ಎಚ್ಚರಿಸಿದ್ದ ಎನ್ನಲಾಗಿದೆ.
ಘಟನೆಯಿಂದ ಅತೀವ ಖಿನ್ನಳಾದ ಬಾಲಕಿ ರಾತ್ರಿ ಊಟ ಮಾಡದೇ ಮಲಗಿದ್ದಳು. ಮಗಳು ನಿದ್ರಿಸದೇ ಒದ್ದಾಡುವುದನ್ನು ಗಮನಿಸಿದ ತಾಯಿ, ಪ್ರೀತಿಯಿಂದ ಕೇಳಿದಾಗ ದೇಹದ ಮೇಲಾದ ಗಾಯದ ಕಲೆಗಳನ್ನು ತೋರಿಸಿದ್ದಾಳೆ. ಇದರಿಂದ ಎಚ್ಚೆತ್ತ ತಾಯಿ, ಎಲ್ಲ ವಿಷಯವನ್ನೂ ಮಗಳಿಂದ ಬಾಯಿ ಬಿಡಿಸಿದ್ದಾಳೆ.  ಮರುದಿನ ಬಾಲಕಿಯನ್ನು ಗುನ್ನಾಳ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.
ತಪ್ಪೊಪ್ಪಿಗೆ: ಬೇವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಹನುಮೇಶನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಆತ ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಪಿಎಸ್‌ಐ ಮಂಗಳಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.