ಜಿಲ್ಲಾದ್ಯಂತ ಗಣರಾಜ್ಯೋತ್ಸವ
ಕೊಪ್ಪಳ: ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ 64ನೇ ಗಣರಾಜ್ಯೋತ್ಸವವನ್ನು ಶನಿವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ವಿದ್ಯಾರ್ಥಿಗಳ ವೈವಿಧ್ಯಮಯ ಕಾರ್ಯಕ್ರಮ ಹಾಗೂ ಪೊಲೀಸ್, ಎನ್ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಶಿಸ್ತುಬದ್ಧ ಪರೇಡ್ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಧ್ವಜವಂದನೆ ಸ್ಪೀಕರಿಸಿದರು. ಧ್ವಜಾರೋಹಣ ಬಳಿಕ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾ ಯಿತು. ಶಾಸಕ ಸಂಗಣ್ಣ ಕರಡಿ, ಕಾಡಾ ಅಧ್ಯಕ್ಷ ಎಚ್.ಗಿರೇಗೌಡ, ಜಿಪಂ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಪ್ಪಣ್ಣ ಪದಕಿ, ನಗರಸಭಾಧ್ಯಕ್ಷ ಸುರೇಶ ದೇಸಾಯಿ, ಡಿಸಿ ತುಳಸಿ ಮದ್ದಿನೇನಿ, ಜಿಪಂ ಸಿಇಓ ಎಸ್, ರಾಜಾರಾಂ, ಎಸ್ಪಿ ಮಂಜುನಾಥ ಅಣ್ಣಿಗೇರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್, ನೂರಾರು ಶಾಲೆ ಕಾಲೇಜು ವಿದ್ಯಾರ್ಥಿಗಳು ಇದ್ದರು. ಕಿನ್ನಾಳ ಕಲೆ ದೆಹಲಿಯಲ್ಲಿ ಅನಾವರಣಗೊಂಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಮುರುಗೇಶ ನಿರಾಣಿ ವಾರ್ತಾ ಇಲಾಖೆ ಅಧಿಕಾರಿಗಳನ್ನು, ರಾಜ್ಯದ ಅಧಿಕಾರಿಗಳನ್ನು ಅಭಿನಂದಿಸಿದರು. ಸಹಾಯಕ ವಾರ್ತಾಧಿಕಾರಿ ತುಕಾರಾಂ ಬಿ.ವಿ. ಅವರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

